×
Ad

ಜಾರ್ಖಂಡ್ | ಎಂಜಿಎಂ ಆಸ್ಪತ್ರೆಯ ಕಟ್ಟಡದ ಒಂದು ಭಾಗ ಕುಸಿತ: ಮೂವರು ಮೃತ್ಯು

Update: 2025-05-04 17:38 IST

Photo credit: indiatoday.in

ರಾಂಚಿ: ಜಾರ್ಖಂಡ್‌ನ ಜಮ್ಶೆಡ್ ಪುರದ ಎಂಜಿಎಂ ಆಸ್ಪತ್ರೆಯಲ್ಲಿ ಶಿಥಿಲಗೊಂಡ ಕಟ್ಟಡದ ಒಂದು ಭಾಗ ಕುಸಿದು ಮೂವರು ಮೃತಪಟ್ಟಿದ್ದು, ಹನ್ನೆರಡು ಜನರನ್ನು ರಕ್ಷಿಸಲಾಗಿದೆ.

ʼಜಮ್ಶೆಡ್‌ಪುರದ ಎಂಜಿಎಂ ಆಸ್ಪತ್ರೆಯಲ್ಲಿ ಶಿಥಿಲಗೊಂಡ ಕಟ್ಟಡದ ಒಂದು ಭಾಗ ಕುಸಿದಿದೆ. ಕಟ್ಟಡದ ಅವಶೇಷಗಳಡಿಯಿಂದ ಮೂವರ ಮೃತದೇಹವನ್ನು ಹೊರತೆಗೆಯಲಾಗಿದೆ. ಅವಶೇಷಗಳಡಿಯಲ್ಲಿ 15 ಮಂದಿ ಸಿಲುಕಿಕೊಂಡಿದ್ದರು. ಅವರಲ್ಲಿ 12 ಮಂದಿಯನ್ನು ರಕ್ಷಿಸಲಾಗಿದೆʼ ಎಂದು ಪೊಲೀಸರು ತಿಳಿಸಿದ್ದಾರೆ.

ಜಾರ್ಖಂಡ್ ಆರೋಗ್ಯ ಸಚಿವ ಇರ್ಫಾನ್ ಅನ್ಸಾರಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತರ ಕುಟುಂಬಸ್ಥರಿಗೆ 5 ಲಕ್ಷ ರೂ. ಪರಿಹಾರ ಮತ್ತು ಗಾಯಾಳುಗಳಿಗೆ 50,000ರೂ. ಪರಿಹಾರ ಘೋಷಿಸಿದರು.

ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ. ಒಂದು ವಾರದೊಳಗೆ ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅನ್ಸಾರಿ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News