×
Ad

ಪುಣೆ ಸಮೀಪ ಹೆಲಿಕಾಪ್ಟರ್ ಪತನ: ಪೈಲಟ್ ಸೇರಿ ಮೂವರು ಮೃತ್ಯು

Update: 2024-10-02 09:54 IST

Photo credit: NDTV

ಪುಣೆ: ಪುಣೆ ಸಮೀಪದ ಬವ್ಧಾನ್ ನ ಗುಡ್ಡೆಗಾಡು ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನಗೊಂಡು ಮೂವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಇಂದು ಬೆಳಗ್ಗೆ ಹೆಲಿಕಾಪ್ಟರ್ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನವಾಗಿದೆ. ಹೆಲಿಕಾಪ್ಟರ್ ನಲ್ಲಿ ಇಬ್ಬರು ಪೈಲಟ್ ಗಳು ಮತ್ತು ಇಂಜಿನಿಯರ್ ಇದ್ದರು ಎನ್ನಲಾಗಿದೆ.

ಇಂದು ಬೆಳಗ್ಗೆ 6.45ರ ಸುಮಾರಿಗೆ ಗುಡ್ಡಗಾಡು ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ ಎಂದು ಪುಣೆಯ ಪಿಂಪ್ರಿ ಚಿಂಚ್ವಾಡ್ ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಇನ್ಸ್ಪೆಕ್ಟರ್ ಕನ್ಹಯ್ಯಾ ಥೋರಟ್ ಮಾಹಿತಿಯನ್ನು ನೀಡಿದ್ದು, ಪುಣೆ ಜಿಲ್ಲೆಯ ಬವ್ಧಾನ್ ಪ್ರದೇಶದಲ್ಲಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಮೂವರು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ. ಈ ಹೆಲಿಕಾಪ್ಟರ್ ಯಾರಿಗೆ ಸೇರಿದ್ದು ಎಂದು ಇನ್ನೂ ಖಚಿತವಾಗಿಲ್ಲ. ಸ್ಥಳದಲ್ಲಿ ರಕ್ಷಣಾ ಕಾರ್ಯಾ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಆಕ್ಸ್ಫರ್ಡ್ ಗಾಲ್ಫ್ ಕ್ಲಬ್ ನ ಹೆಲಿಪ್ಯಾಡ್ನಿಂದ ಹೆಲಿಕಾಪ್ಟರ್ ಟೇಕಾಫ್ ಆಗಿದ್ದು, ಆ ಪ್ರದೇಶದಲ್ಲಿ ದಟ್ಟವಾದ ಮಂಜಿನಿಂದಾಗಿ ಹೆಲಿಕಾಪ್ಟರ್ ಪತನವಾಗಿದೆ ಎಂದು ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News