×
Ad

ಜಮ್ಮು ಕಾಶ್ಮೀರ | ಡಚಿಗಮ್ ಅರಣ್ಯದಲ್ಲಿ ಭದ್ರತಾ ಪಡೆಗಳ ತೀವ್ರ ಕಾರ್ಯಾಚರಣೆ: ಮೂವರು ಭಯೋತ್ಪಾದಕರ ಹತ್ಯೆ

Update: 2025-07-28 14:56 IST

ಸಾಂದರ್ಭಿಕ ಚಿತ್ರ (PTI)

ಶ್ರೀನಗರ: ಜಮ್ಮು ಕಾಶ್ಮೀರದ ಶ್ರೀನಗರದ ಹೊರವಲಯದಲ್ಲಿರುವ ಡಚಿಗಮ್ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳ ತೀವ್ರ ಶೋಧ ಕಾರ್ಯಾಚರಣೆಯಲ್ಲಿ ಕನಿಷ್ಠ ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಸೇನೆಯ ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ.

ಹರ್ವಾನ್ ಪ್ರದೇಶದ ಮೇಲ್ಭಾಗದಲ್ಲಿ ಶಂಕಿತ ಉಗ್ರರ ಚಲನವಲನದ ಬಗ್ಗೆ ಖಚಿತ ಮಾಹಿತಿ ದೊರೆತ ನಂತರ ಸೇನೆ ಶೋಧ ಕಾರ್ಯಾಚರಣೆ ನಡೆಸಿದ್ದು, ಈ ಸಂದರ್ಭ ಭಯೋತ್ಪಾದಕರೊಂದಿಗೆ ಗುಂಡಿನ ಚಕಮಕಿ ನಡೆದಿದೆ.

"ತೀವ್ರ ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಕಾರ್ಯಾಚರಣೆ ಇನ್ನೂ ಮುಂದುವರೆದಿದೆ" ಎಂದು ಸೇನೆಯ 15ನೇ ಕಾರ್ಪ್ಸ್ ಬಿಡುಗಡೆ ಮಾಡಿದ ಪ್ರಕಟಣೆ ತಿಳಿಸಿದೆ.

ಮೃತ ಭಯೋತ್ಪಾದಕರ ಗುರುತನ್ನು ಭದ್ರತಾ ಪಡೆಗಳು ಇನ್ನೂ ಬಹಿರಂಗಪಡಿಸಿಲ್ಲ. ಘಟನಾ ಸ್ಥಳದಲ್ಲಿ ಹೆಚ್ಚಿನ ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಕಳೆದ ಮೇ ತಿಂಗಳಲ್ಲಿ ದಕ್ಷಿಣ ಕಾಶ್ಮೀರದ ಶೋಪಿಯಾನ್ ಮತ್ತು ಅವಂತಿಪೋರಾ ಪ್ರದೇಶಗಳಲ್ಲಿ ನಡೆಸಿದ ಎನ್‌ಕೌಂಟರ್‌ಗಳಲ್ಲಿ ತಲಾ ಮೂವರು ಉಗ್ರರು ಹತ್ಯೆಯಾಗಿದ್ದರು.

ಘಟನೆ ಸಂಬಂಧ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News