×
Ad

ದಿಲ್ಲಿ | ಮೂರು ಅಂತಸ್ತಿನ ಕಟ್ಟಡ ಕುಸಿತ : ಮೂವರು ಕಾರ್ಮಿಕರು ಮೃತ್ಯು

Update: 2025-08-20 18:36 IST

Photo: X@ANI

ಹೊಸದಿಲ್ಲಿ : ದಿಲ್ಲಿಯ ದರಿಯಾಗಂಜ್‌ನಲ್ಲಿರುವ ಸದ್ಭಾವನಾ ಪಾರ್ಕ್ ಬಳಿ ಬುಧವಾರ ಮೂರು ಅಂತಸ್ತಿನ ಕಟ್ಟಡ ಕುಸಿದು ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತರನ್ನು ಝುಬೈರ್, ಗುಲ್ಸಾಗರ್ ಮತ್ತು ತೌಫಿಕ್ ಎಂದು ಗುರುತಿಸಲಾಗಿದೆ. ಕಟ್ಟಡ ಕುಸಿತದ ವೇಳೆ ಮೂವರು ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿದ್ದರು. ಆದರೆ, ಆಸ್ಪತ್ರೆಗೆ ಸಾಗಿಸುವ ವೇಳೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿಗಳು ತೆರಳಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ನಿರ್ಮಾಣ ಕಾರ್ಯ ನಡೆಯುತ್ತಿರುವಾಗ ಕಟ್ಟಡ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಯೋರ್ವರು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News