ಜಮ್ಮು-ಕಾಶ್ಮೀರ: ಕಂದಕಕ್ಕೆ ಉರುಳಿ ಬಿದ್ದ ಬಸ್; 36 ಮಂದಿ ಮೃತ್ಯು
Update: 2023-11-15 14:24 IST
Photo: NDTV
ದೋಡಾ: ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಸ್ ಒಂದು ಸುಮಾರು 200 ಮೀಟರ್ ಆಳದ ಕಂದಕಕ್ಕೆ ಉರುಳಿ ಬಿದ್ದಿದ್ದು, ಘಟನೆಯಲ್ಲಿ ಕನಿಷ್ಠ 36 ಮಂದಿ ಮೃತಪಟ್ಟಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸಂಭವಿಸಿದೆ. ಕಿಶ್ತ್ವಾರದಿಂದ ಜಮ್ಮುಗೆ ಪ್ರಯಾಣಿಸುತ್ತಿದ್ದ ಬಸ್, ಅಸ್ಸಾರ್ ಪ್ರದೇಶದಲ್ಲಿನ ತೃಣಾಲ್ ಬಳಿ ಕಡಿದಾದ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ್ದರಿಂದ ಈ ಘಟನೆ ನಡೆದಿದೆ.
ಬಸ್‌ನಲ್ಲಿ 55 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.
ಘಟನೆಯ ಕುರಿತು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಜನರಲ್ ಮನೋಜ್ ಸಿನ್ಹಾ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.