×
Ad

ಮಧ್ಯಪ್ರದೇಶ | ಮನೆಯೊಂದರಲ್ಲಿ ಅಗ್ನಿ ಅವಘಡ; ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಮೃತ್ಯು

Update: 2024-12-21 10:20 IST

Photo | PTI

ಭೋಪಾಲ್: ಮಧ್ಯಪ್ರದೇಶದ ದೇವಾಸ್ ಜಿಲ್ಲೆಯಲ್ಲಿ ಮನೆಯೊದರಲ್ಲಿ ನಡೆದ ಅಗ್ನಿ ಅವಘಡಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮೃತರನ್ನು ದಿನೇಶ್(35), ಗಾಯತ್ರಿ (30), ಇಶಿಕಾ (10) ಮತ್ತು ಚಿರಾಗ್ (7) ಎಂದು ಗುರುತಿಸಲಾಗಿದೆ.

ಅಗ್ನಿ ಅವಘಡಕ್ಕೆ ಕಾರಣವೇನೆಂದು ತಿಳಿದು ಬಂದಿಲ್ಲ. ಆದರೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಹೇಳಲಾಗಿದೆ. ಅವಘಡ ಸಂಭವಿಸಿದ ಮನೆಯ ಕೆಳ ಮಹಡಿಯಲ್ಲಿ ಹಾಲಿನ ಡೈರಿಯಿತ್ತು ಎಂದು ಹೇಳಲಾಗಿದೆ.   

ʼನಯಾಪುರ ಪ್ರದೇಶದ ಮನೆಯೊಂದರಲ್ಲಿ ಬೆಳಗಿನ ಜಾವ 4.45ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಮನೆಯಲ್ಲಿದ್ದವರು ಉಸಿರುಗಟ್ಟಿ ಮತ್ತು ಸುಟ್ಟ ಗಾಯಗಳಿಂದ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಕಳುಹಿಸಲಾಗಿದೆ. ಯಾವ ಕಾರಣದಿಂದ ಅಗ್ನಿ ಅನಾಹುತ ಸಂಭವಿಸಿದೆ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ದೇವಾಸ್‌ ನ ಪೊಲೀಸ್ ವರಿಷ್ಠಾಧಿಕಾರಿ ಪುನೀತ್ ಗೆಹ್ಲೋಟ್ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News