×
Ad

ನೈಋತ್ಯ ದಿಲ್ಲಿಯಲ್ಲಿ 14 ವರ್ಷದ ಬಾಲಕನಿಂದ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ

Update: 2024-08-31 21:15 IST

   ಸಾಂದರ್ಭಿಕ ಚಿತ್ರ

ಹೊಸದಿಲ್ಲಿ : 5 ವರ್ಷದ ಬಾಲಕಿಯ ಮೇಲೆ ನೆರೆಮನೆಯ 14 ವರ್ಷದ ಬಾಲಕ ಅತ್ಯಾಚಾರವೆಸಗಿರುವ ಘಟನೆ ನೈಋತ್ಯ ದಿಲ್ಲಿಯಲ್ಲಿ ನಡೆದಿದೆ ಎಂದು ಶನಿವಾರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಘಟನೆಯು ದಿನಗೂಲಿ ನೌಕರರಾದ ಆಕೆಯ ಪೋಷಕರು ಕೆಲಸಕ್ಕೆ ತೆರಳಿದ್ದಾಗ, ಗುರವಾರ ಮಧ್ಯಾಹ್ನ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ತಿಳಿಯುತ್ತಿದ್ದಂತೆಯೆ ಬಾಲಕಿಯನ್ನು ಕೂಡಲೇ ವೈದ್ಯಕೀಯ ಪರೀಕ್ಷೆಗೆ ರವಾನಿಸಲಾಗಿದ್ದು, ಆಕೆಯನ್ನು ಆಕೆಯ ಪೋಷಕರ ಸಮ್ಮುಖದಲ್ಲಿ ಆಪ್ತ ಸಮಾಲೋಚನೆಗೆ ಒಳಪಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಆರೋಪಿ ಬಾಲಕನ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 65 (2) (ಅಪ್ರಾಪ್ತೆಯ ಅತ್ಯಾಚಾರ) ಹಾಗೂ ಪೊಕ್ಸೊ ಕಾಯ್ದೆಯಡಿ ದಾಖಲಿಸಿಕೊಳ್ಳಲಾಗಿದೆ. ಆರೋಪಿ ಬಾಲಕನನ್ನು ವಶಕ್ಕೆ ಪಡೆಯಲಾಗಿದ್ದು, ಆತನನ್ನು ಬಾಲಾಪರಾಧ ಕಾರಾಗೃಹಕ್ಕೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಬಾಲಕನು ಸಂತ್ರಸ್ತ ಬಾಲಕಿ ಕುಟುಂಬದ ನೆರೆಯವನಾಗಿದ್ದು, ದೂರದಾರರ ಸ್ನೇಹಿತನ ಪುತ್ರನಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಪ್ರಕರಣದ ಕುರಿತು ಮತ್ತಷ್ಟು ತನಿಖೆ ಪ್ರಗತಿಯಲ್ಲಿದೆ ಎಂದೂ ಅವರು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News