ಮಣಿಪುರದಲ್ಲಿ 5,457 ಅಕ್ರಮ ವಲಸಿಗರು ಪತ್ತೆ: ಸಿಎಂ ಬಿರೇನ್ ಸಿಂಗ್

Update: 2024-05-09 15:05 GMT

ಎನ್.ಬಿರೇನ್ ಸಿಂಗ್ | Photo: X

ಇಂಫಾಲ: ಮಣಿಪುರ ಸರಕಾರ ಕಾಮ್ಜೋಂಗ್ ಜಿಲ್ಲೆಯಲ್ಲಿ 5,457 ಅಕ್ರಮ ವಲಸಿಗರನ್ನು ಪತ್ತೆ ಹಚ್ಚಿದೆ. ಅವರ ಗಡಿಪಾರಿಗೆ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಮಣಿಪುರದ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ತಿಳಿಸಿದ್ದಾರೆ.

5,173 ಜನರ ಬಯೋಮೆಟ್ರಿಕ್ ದತ್ತಾಂಶವನ್ನು ಸಂಗ್ರಹಿಸಲಾಗಿದೆ ಎಂದು ಅವರು ‘ಎಕ್ಸ್’ನಲ್ಲಿ ತಿಳಿಸಿದ್ದಾರೆ. ‘‘ಪೈಖೋಹ್, ಹುಯಿಮಿ ಥಾನಾ/ಸಂಗ್ಕಲೋಕ್ ನಿರಾಶ್ರಿತರ ಶಿಬಿರಗಳಲ್ಲಿ ಆಶ್ರಯ ಪಡೆದುಕೊಂಡವರ ಬಯೋಮೆಟ್ರಿಕ್ ದತ್ತಾಂಶವನ್ನು ಸಂಗ್ರಹಿಸಲಾಗುತ್ತಿದೆ’’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಲ್ಲಾ ಅಕ್ರಮ ವಲಸಿಗರಿಗೆ ತನ್ನ ಸರಕಾರ ಮಾನವೀಯ ನೆಲೆಯ ನೆರವು ನೀಡುತ್ತಿದೆ. ನಾವು ಈ ಪರಿಸ್ಥಿತಿಯನ್ನು ಅತ್ಯಂತ ಸೂಕ್ಷ್ಮತೆಯಿಂದ ನಿರ್ವಹಿಸುತ್ತಿದ್ದೇವೆ ಎಂದು ಅವರು ಹೇಳಿದರು.

ಈ ತಿಂಗಳ ಆರಂಭದಲ್ಲಿ ಮಣಿಪುರಕ್ಕೆ ದಾಟಿದ ಕನಿಷ್ಠ 38ಕ್ಕೂ ಅಧಿಕ ಅಕ್ರಮ ವಲಸಿಗರನ್ನು ಮಾನ್ಮಾರ್ನಲ್ಲಿ ಪತ್ತೆ ಹಚ್ಚಲಾಗಿದೆ. ಅಲ್ಲದೆ, ಅವರನ್ನು ತೆಂಗ್ನೌಪಾಲ್ ಜಿಲ್ಲೆಯ ಮೊರೇಹ್ ಪಟ್ಟಣದ ಮೂಲಕ ಗಡಿಪಾರು ಮಾಡಲಾಗಿದೆ ಎಂದು ಸಿಂಗ್ ಅವರು ಮಾಹಿತಿ ನೀಡಿದ್ದಾರೆ.

ಮೊದಲ ಹಂತದಲ್ಲಿ ಇಂತಹ ಒಟ್ಟು 77 ವಲಸಿಗರನ್ನು ಗಡಿಪಾರು ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - Naufal

contributor

Byline - ವಾರ್ತಾಭಾರತಿ

contributor

Similar News