ಛತ್ತೀಸ್‌ಗಢ | ಭದ್ರತಾ ಪಡೆಗಳಿಂದ ಜಂಟಿ ಕಾರ್ಯಾಚರಣೆ : 6 ನಕ್ಸಲರ ಹತ್ಯೆ
Update: 2025-07-18 19:33 IST
ಸಾಂದರ್ಭಿಕ ಚಿತ್ರ (PTI)
ನಾರಾಯಣಪುರ: ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ ಆರು ಮಂದಿ ನಕ್ಸಲರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾರಾಯಣಪುರ ಅಬುಜ್‌ಮದ್ ಪ್ರದೇಶದ ಕಾಡಿನಲ್ಲಿ ಮಧ್ಯಾಹ್ನ ಭದ್ರತಾ ಪಡೆಗಳ ಜಂಟಿ ತಂಡಗಳು ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದಾಗ ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೋರ್ವರು ತಿಳಿಸಿದ್ದಾರೆ.
ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಹಲವು ಬಾರಿ ಗುಂಡಿನ ಚಕಮಕಿ ನಡೆದಿದೆ. ಇಲ್ಲಿಯವರೆಗೆ ಎನ್‌ಕೌಂಟರ್ ನಡೆದ ಸ್ಥಳದಲ್ಲಿ ಆರು ನಕ್ಸಲರ ಮೃತದೇಹಗಳು ಪತ್ತೆಯಾಗಿದೆ. ಸ್ಥಳದಿಂದ ರೈಫಲ್‌ಗಳು, ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.