ಶಿವಕಾಶಿಯಲ್ಲಿ ಪಟಾಕಿ ಕಾರ್ಖಾನೆ ಸ್ಫೋಟ | 8 ಮಂದಿ ಮೃತ್ಯು
Update: 2024-05-09 18:13 IST
Photo : ANI
ಶಿವಕಾಶಿ : ತಮಿಳುನಾಡಿನ ಶಿವಕಾಶಿಯ ಪಟಾಕಿ ಕಾರ್ಖಾನೆಯೊಂದರಲ್ಲಿ ಗುರುವಾರ ಸಂಭವಿಸಿದ ಸ್ಫೋಟದಲ್ಲಿ ಎಂಟು ಮಂದಿ ಮೃತಪಟ್ಟು, ಕನಿಷ್ಠ 12 ಮಂದಿಗೆ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಮೃತಪಟ್ಟ ಎಂಟು ಮಂದಿ ಪಟಾಕಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಸ್ಫೋಟದ ನಂತರ ಇಡೀ ಕಾರ್ಖಾನೆಗೆ ಬೆಂಕಿ ಆವರಿಸಿಕೊಂಡಿದೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.
ಗಂಭೀರವಾಗಿ ಗಾಯಗೊಂಡ ಕಾರ್ಮಿಕರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಪಘಾತ ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದೆ.