ಲಕ್ನೋದಲ್ಲಿ 86ನೇ ಅಖಿಲ ಭಾರತ ಸ್ಪೀಕರ್‌ಗಳ ಸಮ್ಮೇಳನ ಆರಂಭ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Update: 2026-01-19 21:29 IST
ಲಕ್ನೋ: 86ನೇ ಅಖಿಲ ಭಾರತ ಸ್ಪೀಕರ್‌ಗಳ ಸಮ್ಮೇಳನ (AIPOC) ಉತ್ತರ ಪ್ರದೇಶದ ಲಕ್ನೋದಲ್ಲಿ ಸೋಮವಾರ ಆರಂಭವಾಯಿತು. ಸಮ್ಮೇಳನದಲ್ಲಿ ಕರ್ನಾಟಕದ ಸ್ಪೀಕರ್ ಯುಟಿ ಖಾದರ್ ಭಾಗವಹಿಸಿದ್ದಾರೆ.
ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರ ಭಾಷಣದೊಂದಿಗೆ ಆರಂಭವಾದ ಸಮ್ಮೇಳನದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಉದ್ಘಾಟನಾ ಭಾಷಣ ಮಾಡಿದ್ದಾರೆ.
ಸಮ್ಮೇಳನ ಜನವರಿ 21ರವೆರೆಗೆ ನಡೆಯಲಿದೆ.