×
Ad

ರಾಜಸ್ಥಾನ | 9 ವರ್ಷದ ಬಾಲಕಿ ಹೃದಯಾಘಾತದಿಂದ ಮೃತ್ಯು

Update: 2025-07-17 13:32 IST

ಪ್ರಾಚಿ ಕುಮಾವತ್ (Photo credit: indiatoday.in)

ಜೈಪುರ : ರಾಜಸ್ಥಾನದ ಸಿಕಾರ್‌ನಲ್ಲಿರುವ ಶಾಲೆಯೊಂದರಲ್ಲಿ 9 ವರ್ಷದ ಬಾಲಕಿ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆದರ್ಶ ವಿದ್ಯಾ ಮಂದಿರ ಶಾಲೆಯ ಪ್ರಾಚಿ ಕುಮಾವತ್ ಎಂಬ 4ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಶಾಲೆಯ ಪ್ರಾಂಶುಪಾಲ ನಂದಕಿಶೋರ್, ಎಲ್ಲಾ ವಿದ್ಯಾರ್ಥಿಗಳು ಮಧ್ಯಾಹ್ನ ಊಟ ಮಾಡುತ್ತಿದ್ದರು. 4ನೇ ತರಗತಿಯ ವಿದ್ಯಾರ್ಥಿನಿ ಟಿಫಿನ್ ಬಾಕ್ಸ್ ತೆರೆಯುವಾಗ ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿದ್ದಾಳೆ. ಶಾಲಾ ಸಿಬ್ಬಂದಿ ತಕ್ಷಣ ಪ್ರಜ್ಞಾಹೀನ ಮಗುವನ್ನು ದಂತಾರಾಮ್‌ಗಢ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ವೈದ್ಯರು ಆರಂಭಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಸಿಕಾರ್‌ನ ಎಸ್‌ಕೆ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಬಾಲಕಿಗೆ ಮತ್ತೊಮ್ಮೆ ಹೃದಯಾಘಾತವಾಗಿದೆ. ಇದರಿಂದ ಬಾಲಕಿ ಮೃತಪಟ್ಟಿದ್ದಾಳೆ ಎಂದು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News