×
Ad

ಹರಿಯಾಣ ವಿಧಾನಸಭಾ ಚುನಾವಣೆ | 9 ಗಂಟೆಯವರೆಗೆ ಶೇ. 9.5 ಮತದಾನ

Update: 2024-10-05 10:47 IST

Photo: PTI

ಹೊಸದಿಲ್ಲಿ : ಹರಿಯಾಣ ವಿಧಾನಸಭೆಗೆ ಶನಿವಾರ ಬೆಳಿಗ್ಗೆ ಮತದಾನ ಆರಂಭವಾಗಿದೆ. ಒಂದೇ ಹಂತದಲ್ಲಿ ನಡೆಯುವ ಮತದಾನದಲ್ಲಿ ಒಂದು ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ನಿರ್ಧರಿಸಲಿದ್ದಾರೆ.

ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ, ಭೂಪಿಂದರ್ ಸಿಂಗ್ ಹೂಡಾ ಮತ್ತು ಕಾಂಗ್ರೆಸ್‌ನ ವಿನೇಶ್ ಫೋಗಟ್, ಜೆಜೆಪಿಯ ದುಷ್ಯಂತ್ ಚೌಟಾಲಾ ಕಣದಲ್ಲಿರುವ ಪ್ರಮುಖರು.

ಬೆಳಿಗ್ಗೆ 9 ಗಂಟೆಯವರೆಗೆ 9.5% ಮತದಾನವಾಗಿದೆ. ಆಡಳಿತಾರೂಢ ಬಿಜೆಪಿ ಹ್ಯಾಟ್ರಿಕ್ ಗೆಲುವಿನ ಮೇಲೆ ಕಣ್ಣಿಟ್ಟಿದ್ದು, ದಶಕದ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಪುನರಾಗಮನದ ನಿರೀಕ್ಷೆಯಲ್ಲಿದೆ. ಆಮ್ ಆದ್ಮಿ ಪಕ್ಷ (ಎಎಪಿ), ಭಾರತೀಯ ರಾಷ್ಟ್ರೀಯ ಲೋಕದಳ (ಐಎನ್‌ಎಲ್‌ಡಿ), ಬಹುಜನ ಸಮಾಜವಾದಿ ಪಕ್ಷ (ಬಿಎಸ್‌ಪಿ), ಜನನಾಯಕ ಜನತಾ ಪಕ್ಷ (ಜೆಜೆಪಿ) ಮತ್ತು ಆಜಾದ್ ಸಮಾಜ ಪಕ್ಷ (ಎಎಸ್‌ಪಿ)ಗಳೂ ಜನಾದೇಶದ ನಿರೀಕ್ಷೆಯಲ್ಲಿವೆ.

2019 ರಲ್ಲಿ ನಡೆದ ಕೊನೆಯ ವಿಧಾನಸಭಾ ಚುನಾವಣೆಯಲ್ಲಿ, ಬಿಜೆಪಿ 40 ಸ್ಥಾನಗಳನ್ನು, ಕಾಂಗ್ರೆಸ್ 31 ಮತ್ತು ಜೆಜೆಪಿ 10 ಸ್ಥಾನಗಳನ್ನು ಗೆದ್ದಿತ್ತು. ನಂತರ ಬಿಜೆಪಿಯು ಜೆಜೆಪಿ ಬೆಂಬಲದೊಂದಿಗೆ ಸರ್ಕಾರವನ್ನು ರಚಿಸಿತು. ಪಕ್ಷೇತರರು ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಬೆಂಬಲವನ್ನು ನೀಡಿದ್ದರು. ಮಾರ್ಚ್‌ನಲ್ಲಿ ಬಿಜೆಪಿಯು ಮನೋಹರ್ ಲಾಲ್ ಖಟ್ಟರ್ ಬದಲಿಗೆ ನಯಾಬ್ ಸಿಂಗ್ ಸೈನಿ ಅವರನ್ನು ಮುಖ್ಯಮಂತ್ರಿಯಾಗಿ ನೇಮಿಸಿದ ನಂತರ ಬಿಜೆಪಿ ಸರ್ಕಾರದಿಂದ JJP ಯು ಬೆಂಬಲ ವಾಪಸ್ ಪಡೆದಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News