×
Ad

ದಿಲ್ಲಿ ಉದ್ಯಾನವನದಲ್ಲಿ ಕಾಲೇಜು ವಿದ್ಯಾರ್ಥಿನಿಯನ್ನು ರಾಡ್ ನಿಂದ ಥಳಿಸಿ ಹತ್ಯೆ

Update: 2023-07-28 15:04 IST

ಹೊಸದಿಲ್ಲಿ: ರಾಡ್ ನಿಂದ ಹೊಡೆದು ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಶುಕ್ರವಾರ ದಿಲ್ಲಿಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದಿಲ್ಲಿಯ ಮಾಳವೀಯ ನಗರದ ಅರಬಿಂದೋ ಕಾಲೇಜು ಬಳಿಯ ಉದ್ಯಾನವನದಲ್ಲಿ ಈ ಘಟನೆ ನಡೆದಿದೆ.

ಪೊಲೀಸರ ಪ್ರಕಾರ, ಮೃತಪಟ್ಟ ಯುವತಿ ಕಮಲಾ ನೆಹರು ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ತನ್ನ ಸ್ನೇಹಿತನೊಂದಿಗೆ ಉದ್ಯಾನವನಕ್ಕೆ ಬಂದಿದ್ದಳು.

ಯುವತಿಯ ಮೇಲೆ ರಾಡ್ ನಿಂದ ಹಲ್ಲೆ ನಡೆಸಿದ್ದಾನೆ ಎಂದು ನಂಬಲಾದ 28 ವರ್ಷದ ಸ್ನೇಹಿತನನ್ನು ಪೊಲೀಸರು ಬಂಧಿಸಿದ್ದಾರೆ.

"ದಕ್ಷಿಣ ದಿಲ್ಲಿಯ ಮಾಳವೀಯಾ ನಗರದ ಅರಬಿಂದೋ ಕಾಲೇಜು ಬಳಿ 25 ವರ್ಷದ ಯುವತಿಯ ಶವ ಪತ್ತೆಯಾಗಿದೆ ಎಂಬ ಮಾಹಿತಿ ನಮಗೆ ಬಂದಿತು. ಆಕೆ ತನ್ನ ಸ್ನೇಹಿತನೊಂದಿಗೆ ಪಾರ್ಕ್ ಗೆ ಬಂದಿದ್ದಳು. ಮೃತಳ ತಲೆಯ ಮೇಲೆ ಗಾಯಗಳಿವೆ. ಆಕೆಯ ದೇಹದ ಬಳಿ ಕಬ್ಬಿಣದ ರಾಡ್ ಪತ್ತೆಯಾಗಿದೆ’’ ಎಂದು ದಕ್ಷಿಣ ದಿಲ್ಲಿ ಡಿಸಿಪಿ ಚಂದನ್ ಚೌಧರಿ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News