×
Ad

ರೈಲಿನ ಶೌಚಾಲಯದಲ್ಲಿ ಯುವತಿಯ ಮೃತದೇಹ ಪತ್ತೆ

Update: 2023-09-02 18:22 IST

ಸಾಂದರ್ಭಿಕ ಚಿತ್ರ.| Photo: PTI  

ಪಾಟ್ನಾ: ದಿಲ್ಲಿ-ರಾಜಗೀರ್ ಶ್ರಮಜೀವಿ ಎಕ್ಸ್‌ಪ್ರೆಸ್ (12392) ಬೋಗಿಯ ಶೌಚಾಲಯದಲ್ಲಿ 25 ವರ್ಷದ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದೆ.

ರಾಜ್‌ಗಿರ್ ರೈಲು ನಿಲ್ದಾಣದಲ್ಲಿ ರೈಲನ್ನು ತೊಳೆಯಲು ಪಿಟ್‌ಲೈನ್‌ಗೆ ಹೋದಾಗ ಘಟನೆ ಬೆಳಕಿಗೆ ಬಂದಿದೆ.

ಕೋಚ್ ಸಂಖ್ಯೆ EC16414C ನ ಶೌಚಾಲಯವೊಂದರಲ್ಲಿ ಕುಳಿತಿರುವ ಸ್ಥಿತಿಯಲ್ಲಿ ಯುವತಿಯ ಮೃತದೇಹ ಇರುವುದು ಸಿಬ್ಬಂದಿ ಗಮನಕ್ಕೆ ಬಂದಿದೆ. ಅವರು ತಕ್ಷಣ ಜಿಆರ್‌ಪಿ ಮತ್ತು ಆರ್‌ಪಿಎಫ್‌ಗೆ ಮಾಹಿತಿ ರವಾನಿಸಿದ್ದಾರೆ.

ರೈಲು 10:30 ಕ್ಕೆ ರಾಜ್‌ಗಿರ್ ರೈಲು ನಿಲ್ದಾಣಕ್ಕೆ ಬಂದಿದ್ದು, ಸುಮಾರು 11:30 ರ ಹೊತ್ತಿಗೆ ಪಿಟ್ ಲೈನ್ ಗೆ ತಲುಪಿದೆ.

ಶೌಚಾಲಯದ ಒಳಗಿನ ಕಮೋಡ್ ಮೇಲೆ ಕುಳಿತ ಭಂಗಿಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆಯಾಗಿದೆ.

"ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದೇವೆ. ಆಕೆಯನ್ನು ಕೊಲೆ ಮಾಡಿ, ಆತ್ಮಹತ್ಯೆ ಎಂಬಂತೆ ಬಿಂಬಿಸಲು ಪ್ರಯತ್ನಿಸಿದ್ದಾರೆ. ತನಿಖೆ ನಡೆಯುತ್ತಿದೆ" ಎಂದು ಜಿಆರ್‌ಪಿ ಅಧಿಕಾರಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News