×
Ad

ಮಹುಆ ಮೊಯಿತ್ರಾ ವಿರುದ್ಧ ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲು

Update: 2024-04-02 21:29 IST

ಮಹುಆ ಮೊಯಿತ್ರಾ | Photo: PTI 

ಹೊಸದಿಲ್ಲಿ : ಪ್ರಶ್ನೆಗೆ ನಗದು ಪ್ರಕರಣಕ್ಕೆ ಸಂಬಂಧಿಸಿ ತೃಣಮೂಲ ಕಾಂಗ್ರೆಸ್ ನಾಯಕಿ ಮಹುಆ ಮೊಯಿತ್ರಾ ಅವರ ವಿರುದ್ಧ ಜಾರಿ ನಿರ್ದೇಶನಾಲಯ ಮಂಗಳವಾರ ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಿಸಿದೆ.

ವಿದೇಶಿ ವಿನಿಮಯ ನಿರ್ವಹಣೆ ಕಾಯ್ದೆ (ಎಫ್ಇಎಂಎ) ಉಲ್ಲಂಘನೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮಹುಆ ಮೊಯಿತ್ರಾ ಅವರಿಗೆ ಜಾರಿ ನಿರ್ದೇಶನಾಲಯ ಇತ್ತೀಚೆಗೆ ಹೊಸ ಸಮನ್ಸ್ ನೀಡಿತ್ತು. ಆದರೆ, ಅವರು ವಿಚಾರಣೆಗೆ ಹಾಜರಾಗಿರಲಿಲ್ಲ.

NRE ಖಾತೆಗೆ ಸಂಬಂಧಿಸಿದ ವಹಿವಾಟಿನ ಕುರಿತಂತೆ ಮಹುಆ ಮೊಯಿತ್ರಾ ಅವರನ್ನು ವಿಚಾರಣೆ ನಡೆಸಲು ಜಾರಿ ನಿರ್ದೇಶನಾಲಯ ಬಯಸಿತ್ತು. ಮಹುಆ ಮೊಯಿತ್ರಾ ಅವರು ಈ ಆರೋಪವನ್ನು ನಿರಾಕರಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News