×
Ad

ಎರಡು ವರ್ಷಗಳ ಬಳಿಕ ಜೈಲಿನಿಂದ ಹೊರ ಬಂದ ಆಪ್‌ ನಾಯಕ ಸತ್ಯೇಂದ್ರ ಜೈನ್

Update: 2024-10-18 22:58 IST

ಸತ್ಯೇಂದ್ರ ಜೈನ್ | PC : PTI 

ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯದಿಂದ ದಾಖಲಾಗಿದ್ದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎರಡು ವರ್ಷಗಳಿಂದ ಜೈಲಿನಲ್ಲಿದ್ದ ಮಾಜಿ ಸಚಿವ ಹಾಗೂ ಆಪ್ ನಾಯಕ ಸತ್ಯೇಂದ್ರ ಜೈನ್, ಇಂದು ಸಂಜೆ ಜೈಲಿನಿಂದ ಬಿಡುಗಡೆಗೊಂಡರು. ಇದಕ್ಕೂ ಮುನ್ನ, ಇಂದು ಬೆಳಗ್ಗೆ ಸ್ಥಳೀಯ ನ್ಯಾಯಾಲಯವೊಂದು ಸತ್ಯೇಂದ್ರ ಜೈನ್ ಅವರಿಗೆ ಜಾಮೀನು ಮಂಜೂರು ಮಾಡಿತ್ತು.

ಜೈಲಿನಿಂದ ಬಿಡುಗಡೆಗೊಂಡ ಸತ್ಯೇಂದ್ರ ಜೈನ್ ಅವರನ್ನು ಮುಖ್ಯಮಂತ್ರಿ ಅತಿಶಿ ಸೇರಿದಂತೆ ಹಲವಾರು ಆಪ್ ನಾಯಕರು ಸ್ವಾಗತಿಸಿದರು.

ಮೇ 2023ರಲ್ಲಿ ವೈದ್ಯಕೀಯ ನೆಲೆಯಲ್ಲಿ ಸತ್ಯೇಂದ್ರ ಜೈನ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ನಂತರ, ತನಗೆ ಸಾಮಾನ್ಯ ಜಾಮೀನು ಮಂಜೂರು ಮಾಡಬೇಕು ಎಂಬ ಸತ್ಯೇಂದ್ರ ಜೈನ್ ರ ಮನವಿಯನ್ನು ಈ ವರ್ಷದ ಮಾರ್ಚ್ ತಿಂಗಳಲ್ಲಿ ಸುಪ್ರೀಂ ಕೋರ್ಟ್ ತಳ್ಳಿ ಹಾಕಿತ್ತು. ಹೀಗಾಗಿ, ಅವರು ಮತ್ತೆ ದಿಲ್ಲಿಯ ತಿಹಾರ್ ಜೈಲಿಗೆ ಮರಳಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News