ರಾಜ್ಯಸಭೆಯಿಂದ ಎಎಪಿ ಸಂಸದ ರಾಘವ್ ಚಡ್ಡಾ ಅಮಾನತು
Update: 2023-08-11 15:00 IST
Photo: PTI
ಹೊಸದಿಲ್ಲಿ: ಐವರು ರಾಜ್ಯಸಭಾ ಸಂಸದರ ಸಹಿಯನ್ನು 'ಫೋರ್ಜರಿ' ಮಾಡಿದ್ದಾರೆ ಎಂಬ ಆರೋಪ ಹೊತ್ತಿರುವ ಎಎಪಿ ಸಂಸದ ರಾಘವ್ ಚಡ್ಡಾ ಅವರನ್ನು ಶುಕ್ರವಾರ ಸಂಸತ್ತಿನ ಮೇಲ್ಮನೆಯಿಂದ ಅಮಾನತುಗೊಳಿಸಲಾಗಿದೆ.
ರಾಘವ್ ಅವರ ವಿರುದ್ಧದ ಪ್ರಕರಣದ ತನಿಖೆಯ ವಿಶೇಷಾಧಿಕಾರಗಳ ಸಮಿತಿಯು ತನ್ನ ವರದಿಯನ್ನು ಸಲ್ಲಿಸುವವರೆಗೆ ಅವರನ್ನು ರಾಜ್ಯಸಭೆಯಿಂದ ಅಮಾನತಿನಲ್ಲಿ ಇಡಲಾಗಿದೆ.
ಎಎಪಿ ಸಂಸದ ಸಂಜಯ್ ಸಿಂಗ್ ಅವರ ಅಮಾನತು ಅವಧಿಯನ್ನು ಸಹ ವಿಸ್ತರಿಸಲಾಗಿದೆ.