×
Ad

ದಿಲ್ಲಿ ವಿಧಾನಸಭಾ ಚುನಾವಣೆ : 20 ಅಭ್ಯರ್ಥಿಗಳ ಎರಡನೇ ಪಟ್ಟಿ ಪ್ರಕಟಿಸಿದ ಎಎಪಿ

Update: 2024-12-09 13:45 IST

Photo credit: PTI

ಹೊಸದಿಲ್ಲಿ: ಮುಂಬರುವ ದಿಲ್ಲಿ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷವು ಸೋಮವಾರ ತನ್ನ 20 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಿದೆ.

ಪಟ್ಟಿಯಲ್ಲಿ ಎಎಪಿ ಪಕ್ಷದ ಹಿರಿಯ ನಾಯಕ ಮನೀಶ್ ಸಿಸೋಡಿಯಾ ಅವರಿಗೆ ಜಂಗ್ ಪುರ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಇತ್ತೀಚೆಗಷ್ಟೇ ಎಎಪಿಗೆ ಸೇರ್ಪಡೆಗೊಂಡಿರುವ ಶಿಕ್ಷಣತಜ್ಞ ಅವಧ್ ಓಜಾ ಅವರಿಗೆ ಪ್ರಸ್ತುತ ಸಿಸೋಡಿಯಾ ಅವರು ಪ್ರತಿನಿಧಿಸುತ್ತಿರುವ ಪಟ್ಪರ್ಗಂಜ್ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ.

ಶಹದಾರದಿಂದ ಜಿಂತೆಂದರ್ ಸಿಂಗ್ ಶುಂಟಿ ಅವರಿಗೆ ಮತ್ತು ತಿಮಾರ್ ಪುರದಿಂದ ಸುರೀಂದರ್ ಪಾಲ್ ಸಿಂಗ್ ಬಿಟ್ಟು ಅವರಿಗೆ ಟಿಕೆಟ್ ನೀಡಲಾಗಿದೆ. ಅವರು ಇತ್ತೀಚೆಗೆ ಬಿಜೆಪಿಯನ್ನು ತೊರೆದು ಎಎಪಿಗೆ ಸೇರ್ಪಡೆಗೊಂಡಿದ್ದರು.

ಎಎಪಿ ಇತ್ತೀಚೆಗೆ ಬಿಡುಗಡೆ ಮಾಡಿದ ಮೊದಲ ಪಟ್ಟಿಯಲ್ಲಿ 11 ಅಭ್ಯರ್ಥಿಗಳಿಗೆ ಟಿಕೆಟ್ ಘೋಷಿಸಿತ್ತು, ಇದೀಗ ಮತ್ತೆ 20 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. 70 ಸದಸ್ಯ ಬಲದ ದಿಲ್ಲಿ ವಿಧಾನಸಭೆಗೆ ಫೆಬ್ರವರಿಯಲ್ಲಿ ಚುನಾವಣೆ ನಡೆಯುವ ನಿರೀಕ್ಷೆ ಇದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News