×
Ad

ಬಿಹಾರ ವಿಧಾನಸಭಾ ಚುನಾವಣೆ | ಆಪ್ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆ

Update: 2025-10-20 11:07 IST

Photo | ANI

ಪಾಟ್ನ : ಬಿಹಾರ ವಿಧಾನಸಭಾ ಚುನಾವಣೆ ಹಿನ್ನೆಲೆ ಆಪ್ ಪಕ್ಷ 12 ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಈವರೆಗೆ ಆಪ್ ಪಕ್ಷವು 132 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ನಾಲ್ಕನೇ ಪಟ್ಟಿಯಲ್ಲಿ ಮಧುಬನ್ ಕ್ಷೇತ್ರದಲ್ಲಿ ಕುಮಾರ್ ಕುನಾಲ್ ಮತ್ತು ಗಯಾ ಪಟ್ಟಣದಲ್ಲಿ ಅನಿಲ್ ಕುಮಾರ್ ಅವರಿಗೆ ಟಿಕೆಟ್ ನೀಡಲಾಗಿದೆ.

ಅಕ್ಟೋಬರ್ 18ರಂದು ಆಪ್ ಪಕ್ಷವು 50 ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಬಿಹಾರ ಚುನಾವಣೆಯಲ್ಲಿ ಆಪ್ ಪಕ್ಷವು ಸ್ವತಂತ್ರವಾಗಿ ಸ್ಪರ್ಧಿಸುತ್ತಿದೆ.

ಬಿಹಾರದ 243 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 6 ಮತ್ತು 11ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ನವೆಂಬರ್ 14ರಂದು ಫಲಿತಾಂಶ ಪ್ರಕಟವಾಗಲಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News