×
Ad

ಕೇಜ್ರಿವಾಲ್‌ ಬಂಧನ ಖಂಡಿಸಿ ಪ್ರಧಾನಿ ನಿವಾಸಕ್ಕೆ ಮೆರವಣಿಗೆ: ಸೆಕ್ಷನ್ 144 ಜಾರಿ, ಹಲವು ಆಪ್ ನಾಯಕರು ವಶಕ್ಕೆ

Update: 2024-03-26 13:07 IST

Screengrab:X/ANI

ಹೊಸದಿಲ್ಲಿ: ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನವನ್ನು ವಿರೋಧಿಸಿ ಪಟೇಲ್ ಚೌಕ್ ಮೆಟ್ರೋ ನಿಲ್ದಾಣದ ಹೊರಗಿನಿಂದ ಲೋಕಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನಿವಾಸದತ್ತ ಮೆರವಣಿಗೆ ನಡೆಸುತ್ತಿದ್ದ ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡರು ಮತ್ತು ಕಾರ್ಯಕರ್ತರನ್ನು ದಿಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸೆಕ್ಷನ್ 144 ಜಾರಿಗೊಳಿಸಿದ್ದರಿಂದ ಪ್ರತಿಭಟನೆ ನಡೆಸಲು ಅನುಮತಿ ಇಲ್ಲ ಎಂದು ದಿಲ್ಲಿ ಪೊಲೀಸರು ಹೇಳಿದ್ದಾರೆ.

ಪ್ರತಿಭಟನೆಯ ಹಿನ್ನೆಲೆಯಲ್ಲಿ ದೆಹಲಿ ಟ್ರಾಫಿಕ್ ಪೊಲೀಸರು ಪ್ರಮುಖ ಮಾರ್ಗಗಳಲ್ಲಿ ಮಾರ್ಗ ಬದಲಾವಣೆ ಮಾಡಿದ್ದಾರೆ. ತುಘಲಕ್ ರಸ್ತೆ, ಸಫ್ದರ್ಜಂಗ್ ರಸ್ತೆ ಮತ್ತು ಕೆಮಾಲ್ ಅಟಾತುರ್ಕ್ ಮಾರ್ಗದಲ್ಲಿ ಎಲ್ಲಿಯೂ ವಾಹನಗಳನ್ನು ನಿಲ್ಲಿಸಲು ಅನುಮತಿಸುವುದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News