×
Ad

ರೇಖಾ ಗುಪ್ತಾ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಕಂಡು ಬಂದ ಆಪ್‌ ಸಂಸದೆ ಸ್ವಾತಿ ಮಲಿವಾಲ್!

Update: 2025-02-20 15:53 IST

Photo credit: PTI

ಹೊಸದಿಲ್ಲಿ: ಬಿಜೆಪಿಯ ರೇಖಾ ಗುಪ್ತಾ ಅವರು ದಿಲ್ಲಿಯ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಆಪ್ ಸಂಸದೆ ಸ್ವಾತಿ ಮಲಿವಾಲ್ ಭಾಗವಹಿಸಿದ್ದಾರೆ.

ದಿಲ್ಲಿಯ ರಾಮ್ ಲೀಲಾ ಮೈದಾನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ವೇದಿಕೆಯಲ್ಲಿ ಗಣ್ಯರ ಸಾಲಿನಲ್ಲಿ ಸ್ವಾತಿ ಮಲಿವಾಲ್ ಕಂಡು ಬಂದಿದ್ದಾರೆ. ಅವರು ಕಾಂಗ್ರೆಸ್‌ನ ದಿಲ್ಲಿ ಘಟಕದ ಮುಖ್ಯಸ್ಥ ದೇವೆಂದರ್ ಯಾದವ್ ಅವರೊಂದಿಗೆ ಮಾತನಾಡುತ್ತಿರುವುದು ಪಿಟಿಐ ಹಂಚಿಕೊಂಡ ವೀಡಿಯೊದಲ್ಲಿ ಕಂಡು ಬಂದಿದೆ.

ಒಂದು ಕಾಲದಲ್ಲಿ ಆಪ್ ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತರಲ್ಲಿ ಗುರುತಿಸಿಕೊಂಡಿದ್ದ ಸ್ವಾತಿ ಮಲಿವಾಲ್ ಆ ಬಳಿಕದ ಬೆಳವಣಿಗೆಯಲ್ಲಿ ಆಪ್ ಪಕ್ಷದ ಟೀಕಾಕಾರರಾಗಿ ಬದಲಾಗಿದ್ದಾರೆ. ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆಂದು ಸ್ವಾತಿ ಮಲಿವಾಲ್ ಈ ಹಿಂದೆ ಆರೋಪಿಸಿದ್ದರು. ಆಪ್ ನಾಯಕರು ಸ್ವಾತಿ ಮಲಿವಾಲ್ ಬಿಜೆಪಿಯ ಏಜೆಂಟ್ ಎಂದು ಹೇಳಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News