ದ್ವೇಷ ಭಾಷಣ ಪ್ರಕರಣ : ಶಾಸಕ ಅಬ್ಬಾಸ್ ಅನ್ಸಾರಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ
Update: 2025-05-31 16:52 IST
ಅಬ್ಬಾಸ್ ಅನ್ಸಾರಿ (Photo: PTI)
ಲಕ್ನೋ : 2022ರ ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿ ʼಮೌʼ ಕ್ಷೇತ್ರದ ಶಾಸಕ ಅಬ್ಬಾಸ್ ಅನ್ಸಾರಿ ದೋಷಿ ಎಂದು ಉತ್ತರ ಪ್ರದೇಶದ ಜನಪ್ರತಿನಿಧಿಗಳ ನ್ಯಾಯಾಲಯ ಶನಿವಾರ ತೀರ್ಪು ಪ್ರಕಟಿಸಿದೆ. ಅನ್ಸಾರಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ.
2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಮಾಡಿದ ಭಾಷಣಕ್ಕೆ ಸಂಬಂಧಿಸಿ ಶಾಸಕ ಅಬ್ಬಾಸ್ ಅನ್ಸಾರಿ ವಿರುದ್ಧ ಪ್ರಕರಣ ದಾಖಲಾಗಿತ್ತು.
ಮಾಜಿ ಶಾಸಕ ಮುಖ್ತಾರ್ ಅನ್ಸಾರಿ ಪುತ್ರನಾಗಿರುವ ಅಬ್ಬಾಸ್ ಅನ್ಸಾರಿ ಸುಹೇಲ್ ದೇವ್ ಭಾರತೀಯ ಸಮಾಜ (SBSP) ಪಕ್ಷದ ಟಿಕೆಟ್‌ನಲ್ಲಿ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು. ಅವರಿಗೆ ಸಮಾಜವಾದಿ ಪಕ್ಷ ಚುನಾವಣೆಯಲ್ಲಿ ಬೆಂಬಲ ನೀಡಿತ್ತು.