×
Ad

ದ್ವೇಷ ಭಾಷಣ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಶಾಸಕ ಅಬ್ಬಾಸ್ ಅನ್ಸಾರಿ ಉತ್ತರ ಪ್ರದೇಶ ವಿಧಾನಸಭೆಯಿಂದ ಅನರ್ಹ

Update: 2025-06-01 15:41 IST

ಅಬ್ಬಾಸ್ ಅನ್ಸಾರಿ (PTI)

ಲಕ್ನೋ : 2022ರ ದ್ವೇಷ ಭಾಷಣ ಪ್ರಕರಣದಲ್ಲಿ ʼಮೌʼ ಕ್ಷೇತ್ರದ ಶಾಸಕ ಅಬ್ಬಾಸ್ ಅನ್ಸಾರಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದ ಬೆನ್ನಲ್ಲೇ ಅವರನ್ನು ಉತ್ತರಪ್ರದೇಶ ವಿಧಾನಸಭೆಯಿಂದ ಅನರ್ಹಗೊಳಿಸಲಾಗಿದೆ.

ಮಾಜಿ ಶಾಸಕ ಮುಖ್ತಾರ್ ಅನ್ಸಾರಿ ಪುತ್ರನಾಗಿರುವ ಅಬ್ಬಾಸ್ ಅನ್ಸಾರಿ ಸುಹೇಲ್ ದೇವ್ ಭಾರತೀಯ ಸಮಾಜ (SBSP)ಪಕ್ಷದ ಶಾಸಕರಾಗಿದ್ದರು. 2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಮಾಡಿದ ಭಾಷಣಕ್ಕೆ ಸಂಬಂಧಿಸಿ ಶಾಸಕ ಅಬ್ಬಾಸ್ ಅನ್ಸಾರಿ ವಿರುದ್ಧ ಪ್ರಕರಣ ದಾಖಲಾಗಿತ್ತು

ದ್ವೇಷ ಭಾಷಣ ಪ್ರಕರಣದಲ್ಲಿ ಅಬ್ಬಾಸ್‌ ಅನ್ಸಾರಿ ದೋಷಿ ಎಂದು ತೀರ್ಪು ನೀಡಿದ ಉತ್ತರ ಪ್ರದೇಶದ ಜನಪ್ರತಿನಿಧಿಗಳ ನ್ಯಾಯಾಲಯ ಅನ್ಸಾರಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News