ಲೋಕಸಭೆಯಲ್ಲಿ ಟಿಎಂಸಿ ನಾಯಕನಾಗಿ ಅಭಿಷೇಕ್ ಬ್ಯಾನರ್ಜಿ ನಿಯೋಜನೆ
Update: 2025-08-04 21:39 IST
ಅಭಿಷೇಕ್ ಬ್ಯಾನರ್ಜಿ | PC : PTI
ಹೊಸದಿಲ್ಲಿ, ಆ. 5: ತೃಣಮೂಲ ಕಾಂಗ್ರೆಸ್ (ಟಿಎಂಸಿ) ಲೋಕಸಭೆಯಲ್ಲಿ ತನ್ನ ಪಕ್ಷದ ನಾಯಕನನ್ನಾಗಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರನ್ನು ಸೋಮವಾರ ನಿಯೋಜಿದೆ.
ಡೈಮಂಡ್ ಹಾರ್ಬರ್‌ನಿಂದ ಮೂರು ಬಾರಿ ಸಂಸದರಾಗಿರುವ ಅಭಿಷೇಕ್ ಬ್ಯಾನರ್ಜಿ ಅವರನ್ನು ಅನಾರೋಗ್ಯ ಕಾರಣದಿಂದ ಲೋಕಸಭೆಯಲ್ಲಿ ಪಕ್ಷದ ನಾಯಕನ ಜವಾಬ್ದಾರಿಯಿಂದ ಮುಕ್ತರಾದ ಕೋಲ್ಕತ್ತಾ ಉತ್ತರದ ಹಿರಿಯ ಸಂಸದ ಸುದೀಪ್ ಬಂದೋಪಾದ್ಯಾಯ ಅವರ ಸ್ಥಾನಕ್ಕೆ ನಿಯೋಜಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಟಿಎಂಸಿ ವರಿಷ್ಠೆ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಧ್ಯಕ್ಷತೆಯಲ್ಲಿ ನಡೆದ ಟಿಎಂಸಿ ಸಂಸದರ ವರ್ಚುವಲ್ ಸಭೆಯ ಸಂದರ್ಭ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಲೋಕಸಭೆ ಹಾಗೂ ರಾಜ್ಯ ಸಭೆಯ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು.
ಅಭಿಷೇಕ್ ಬ್ಯಾನರ್ಜಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ.