×
Ad

ಲೋಕಸಭೆ ಚುನಾವಣೆಯಲ್ಲಿ ಎನ್‌ ಡಿ ಎ 400ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಲಿದೆ: ಪ್ರಧಾನಿ

Update: 2024-02-16 21:26 IST

Photo : PTI 

ಹೊಸದಿಲ್ಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ ಡಿ ಎ 400ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ.

ಹರ್ಯಾಣದ ರೆವಾಡಿಯಲ್ಲಿ ಆಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಏಮ್ಸ್)ಗೆ ಶಂಕು ಸ್ಥಾಪನೆ ಹಾಗೂ ಹಲವು ಯೋಜನೆಗಳನ್ನು ಉದ್ಘಾಟಿಸಿದ ಬಳಿಕ ಅವರು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.

ಪ್ರಜಾಪ್ರಭುತ್ವದಲ್ಲಿ ಸ್ಥಾನಗಳು ಮುಖ್ಯ. ಆದರೆ, ನನಗೆ ಜನರ ಆಶೀರ್ವಾದ ಅತಿ ದೊಡ್ಡ ಸೊತ್ತು ಎಂದು ಅವರು ಹೇಳಿದರು. ಭಾರತ ಇಂದು ಜಗತ್ತಿನಲ್ಲಿ ಹೊಸ ಎತ್ತರಕ್ಕೆ ತಲುಪಿದೆ. ಇದು ಜನರ ಆಶೀರ್ವಾದದಿಂದ ಸಾಧ್ಯವಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ವಾರ ಯುಎಇ ಹಾಗೂ ಖತರ್‌ ಗೆ ನೀಡಿದ ಭೇಟಿಯನ್ನು ಉಲ್ಲೇಖಿಸಿದ ಅವರು, ಭಾರತ ಇಂದು ಜಗತ್ತಿನ ಪ್ರತಿ ಮೂಲೆಯಿಂದಲೂ ಗೌರವ ಪಡೆಯುತ್ತಿದೆ. ಇದಕ್ಕೆ ಮೋದಿ ಮಾತ್ರ ಕಾರಣನಲ್ಲ. ಪ್ರತಿಯೊಬ್ಬ ಭಾರತೀಯ ಕೂಡ ಕಾರಣ ಎಂದರು.

ಪ್ರತಿಪಕ್ಷ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಮೋದಿ, ರಾಮ ಕಾಲ್ಪನಿಕ ವ್ಯಕ್ತಿ ಎಂದು ಹೇಳುತ್ತಿರುವವರು ಹಾಗೂ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಬಯಸದಿದ್ದವರು ಕೂಡ ಈಗ ‘ಜೈ ಶ್ರೀರಾಮ್’ ಎಂದು ಪಠಿಸುತ್ತಿದ್ದಾರೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News