×
Ad

ಸಮುದಾಯದ ಭಾವನೆಗಳಿಗೆ ಧಕ್ಕೆ ಆರೋಪ: ಹೈದರಾಬಾದ್‌ ಬಿಜೆಪಿ ಅಭ್ಯರ್ಥಿ ವಿರುದ್ಧ ಪ್ರಕರಣ

Update: 2024-04-22 15:09 IST

ಮಾಧವಿ ಲತಾ | PC : X 

ಹೈದರಾಬಾದ್: ಹೈದರಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಅವರ ವಿರುದ್ಧ ಭಾವನೆಗಳಿಗೆ ಧಕ್ಕೆ ತಂಡ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.

ಹೈದರಾಬಾದಿನಲ್ಲಿ ಬುಧವಾರ ನಡೆದ ರಾಮ ನವಮಿ ಶೋಭಾ ಯಾತ್ರೆಯಲ್ಲಿ ನಿರ್ದಿಷ್ಟ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಹೈದರಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ವಿರುದ್ಧ ಹೈದರಾಬಾದ್‌ನ ಬೇಗಂ ಬಜಾರ್ ಪೊಲೀಸರು ಭಾನುವಾರ ಪ್ರಕರಣ ದಾಖಲಿಸಿದ್ದಾರೆ.

ಫಸ್ಟ್ ಲ್ಯಾನ್ಸರ್ ನಿವಾಸಿ ಮಹಮ್ಮದ್ ಇರ್ಫಾನ್ ಎಂಬವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಇನ್ಸ್ ಪೆಕ್ಟರ್ ಜಿ.ವಿಜಯ್ ಕುಮಾರ್ ತಿಳಿಸಿದ್ದಾರೆ.

"ರಾಮ ನವಮಿ ಶೋಭಾ ಯಾತ್ರೆಯ ಸಂದರ್ಭದಲ್ಲಿ ಮಾಧವಿ ಲತಾ ಅವರು ತಮ್ಮ ಭಾಷಣದಲ್ಲಿ ನೋವುಂಟುಮಾಡುವ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ" ಎಂದು ಅವರು ಹೇಳಿದರು.

ದೂರಿನ ಆಧಾರದ ಮೇಲೆ ಪೊಲೀಸರು ಆಕೆಯ ವಿರುದ್ಧ ಐಪಿಸಿಯ ಸೆಕ್ಷನ್ 295 ಎ ಮತ್ತು ಪ್ರಜಾಪ್ರತಿನಿಧಿ ಕಾಯ್ದೆಯ 125 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News