ಕೇರಳ | ಅದಾನಿಯ ವಿಳಿಂಜಂ ಬಂದರನ್ನು ಉದ್ಘಾಟಿಸಿದ ಪ್ರಧಾನಿ ಮೋದಿ
Update: 2025-05-02 12:38 IST
Photo | PTI
ತಿರುವನಂತಪುರಂ : ಕೇರಳದ ರಾಜಧಾನಿ ತಿರುವನಂತಪುರಂನಲ್ಲಿ ವಿಳಿಂಜಂ ಅಂತಾರಾಷ್ಟ್ರೀಯ ಬಂದರನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು.
ಅದಾನಿ ಬಂದರುಗಳು ಮತ್ತು ವಿಶೇಷ ಆರ್ಥಿಕ ವಲಯ ಲಿಮಿಟೆಡ್(APSEZ) ವಿಳಿಂಜಂ ಬಂದರನ್ನು ನಿರ್ಮಾಣ ಮಾಡಿದೆ. ಇದಕ್ಕೆ 8,867 ಕೋಟಿ ವೆಚ್ಚವಾಗಿದೆ ಎಂದು ತಿಳಿದು ಬಂದಿದೆ.
ಇದು ಭಾರತದ ಮೊದಲ ಪ್ರಪ್ರಥಮ ಆಳ ಸಮುದ್ರ ಕಂಟೈನರ್ ಸಾಗಣೆ ಬಂದರಾಗಿದೆ. ಇದು ಜಾಗತಿಕವಾಗಿ ತಾಂತ್ರಿಕವಾಗಿ ಅತ್ಯಾಧುನಿಕ ಟ್ರಾನ್ಸ್ಶಿಪ್ಮೆಂಟ್ ಬಂದರುಗಳಲ್ಲಿ ಒಂದಾಗಿದೆ.
ವಿಳಿಂಜಂ ಬಂದರನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಬಂದರನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. ಈ ವೇಳೆ ಅದಾನಿ ಸಮೂಹದ ಮುಖ್ಯಸ್ಥ ಗೌತಮ್ ಅದಾನಿ, ಕೇರಳ ಸಿಎಂ ಪಿಣರಾಯ್ ವಿಜಯನ್ ಉಪಸ್ಥಿತರಿದ್ದರು.