ಉಪರಾಷ್ಟ್ರಪತಿ ಚುನಾವಣೆ |ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಗೆ ಎಐಎಂಐಎಂ ಬೆಂಬಲ : ಅಸಾದುದ್ದೀನ್ ಉವೈಸಿ ಘೋಷಣೆ
Update: 2025-09-07 10:52 IST
ಹೈದರಾಬಾದ್ : ಉಪರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಬಿ. ಸುದರ್ಶನ್ ರೆಡ್ಡಿ ಅವರಿಗೆ ನಮ್ಮ ಪಕ್ಷವು ಬೆಂಬಲ ನೀಡಲಿದೆ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಉವೈಸಿ ಘೋಷಿಸಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅಸಾದುದ್ದೀನ್ ಉವೈಸಿ, ತೆಲಂಗಾಣದ ಮುಖ್ಯಮಂತ್ರಿಗಳು ನನ್ನನ್ನು ಭೇಟಿ ಮಾಡಿ ಸೆಪ್ಟೆಂಬರ್ 9ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಸುದರ್ಶನ್ ರೆಡ್ಡಿ ಅವರನ್ನು ಬೆಂಬಲಿಸುವಂತೆ ವಿನಂತಿಸಿದ್ದಾರೆ. ಎಐಎಂಐಎಂ ಪಕ್ಷವು ಹೈದರಾಬಾದ್‌ನವರೇ ಆದ ಗೌರವಾನ್ವಿತ ಮಾಜಿ ನ್ಯಾಯಮೂರ್ತಿ ಸುದರ್ಶನ್ ರೆಡ್ಡಿ ಅವರಿಗೆ ತನ್ನ ಬೆಂಬಲವನ್ನು ನೀಡಲಿದೆ ಎಂದು ಹೇಳಿದ್ದಾರೆ.
ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶರಾದ ರೆಡ್ಡಿ ಅವರೊಂದಿಗೆ ಮಾತನಾಡಿ, ಅವರಿಗೆ ಶುಭ ಹಾರೈಸಿದ್ದೇನೆ ಎಂದು ಅಸಾದುದ್ದೀನ್ ಉವೈಸಿ ಹೇಳಿದರು.