×
Ad

ವಕ್ಫ್ ಉಮೀದ್ ಪೋರ್ಟಲ್‌ಗೆ ಚಾಲನೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಲು ಮುಂದಾದ AIMPLB

Update: 2025-06-05 17:48 IST

Photo | NDTV

ಹೊಸದಿಲ್ಲಿ: ಜೂನ್ 6ರಂದು ವಕ್ಫ್ ಉಮೀದ್ ಪೋರ್ಟಲ್‌ಗೆ ಚಾಲನೆ ನೀಡುವ ಕೇಂದ್ರ ಸರಕಾರದ ಕ್ರಮಕ್ಕೆ ಅಖಿಲ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (AIMPLB) ಆಕ್ಷೇಪ ವ್ಯಕ್ತಪಡಿಸಿದೆ. ಸರಕಾರದ ಈ ಕ್ರಮವು ಕಾನೂನುಬಾಹಿರವಾಗಿದೆ ಮತ್ತು ನ್ಯಾಯಾಂಗ ನಿಂದನೆಯಾಗಿದೆ ಎಂದು ಹೇಳಿದೆ.

ಈ ಕುರಿತು ಹೇಳಿಕೆ ಹೊರಡಿಸಿರುವ ಅಖಿಲ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ, ಸುಪ್ರೀಂ ಕೋರ್ಟ್ ತೀರ್ಪು ನೀಡುವವರೆಗೆ ಮುಸ್ಲಿಮರು ಮತ್ತು ರಾಜ್ಯ ವಕ್ಫ್ ಮಂಡಳಿ ಪೋರ್ಟಲ್ ಅನ್ನು ಬಳಸದಂತೆ ಮನವಿ ಮಾಡಿದೆ. ನ್ಯಾಯಾಂಗ ನಿಂದನೆ ಅರ್ಜಿಯನ್ನು ಸಲ್ಲಿಸುವ ಮೂಲಕ ಸರಕಾರದ ಈ ಕ್ರಮದ ವಿರುದ್ಧ ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸುವುದಾಗಿ ಹೇಳಿದೆ.

ಎಲ್ಲಾ ಮುಸ್ಲಿಂ ಸಂಘಟನೆಗಳು ಕಾನೂನನ್ನು ವಿರೋಧಿಸಿವೆ ಮತ್ತು ವಿರೋಧ ಪಕ್ಷಗಳು, ಮಾನವ ಹಕ್ಕುಗಳ ಗುಂಪುಗಳು ಮತ್ತು ಸಿಖ್ ಮತ್ತು ಕ್ರಿಶ್ಚಿಯನ್ ಸಂಸ್ಥೆಗಳು ಸೇರಿದಂತೆ ಅಲ್ಪಸಂಖ್ಯಾತ ಸಮುದಾಯಗಳು ಇದನ್ನು ಟೀಕಿಸಿದೆ ಎಂದು ಹೇಳಿದೆ.

ಈ ಕುರಿತ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಯಲ್ಲಿದೆ. ಸರಕಾರ ಪೋರ್ಟಲ್ ಪ್ರಾರಂಭಿಸಲು ಮುಂದಾಗಿದೆ ಮತ್ತು ಆ ಮೂಲಕ ವಕ್ಫ್ ಆಸ್ತಿಗಳ ನೋಂದಣಿಯನ್ನು ಕಡ್ಡಾಯಗೊಳಿಸಿದೆ. ಇದು ನ್ಯಾಯಾಂಗ ನಿಂದನೆಯಾಗಿದೆ ಎಂದು ಎಐಎಂಪಿಎಲ್‌ಬಿ ಹೇಳಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News