×
Ad

ಏರ್ ಇಂಡಿಯಾ ವಿಮಾನ ಅಪಘಾತ: ಬದುಕುಳಿದ ಓರ್ವ ಪ್ರಯಾಣಿಕ!

Update: 2025-06-12 19:33 IST

PC : PTI 

ಅಹ್ಮದಾಬಾದ್: ಗುಜರಾತ್ ನ ಅಹ್ಮದಾಬಾದ್ ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಒಬ್ಬ ಪ್ರಯಾಣಿಕ ಬದುಕುಳಿದಿದ್ದಾರೆ ಎಂದು ಅಹಮದಾಬಾದ್ ಪೊಲೀಸ್ ಆಯುಕ್ತ ಜಿ.ಎಸ್. ಮಲಿಕ್ ಹೇಳಿದ್ದಾರೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ರಮೇಶ್ ವಿಶ್ವಾಸ್ ಕುಮಾರ್ ಬುಚರ್ವಾಡಾ ಬದುಕುಳಿದ ಪ್ರಯಾಣಿಕ ಎಂದು ತಿಳಿದು ಬಂದಿದೆ. ಅವರು 11A ಸೀಟಿನಲ್ಲಿ ಕುಳಿತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ರಮೇಶ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಅಹ್ಮದಾಬಾದ್ ನಿಂದ ಲಂಡನ್ ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News