ಅಹ್ಮದಾಬಾದ್ ಏರ್ ಇಂಡಿಯಾ ವಿಮಾನ ದುರಂತ | ನ್ಯಾಯಾಂಗ ತನಿಖೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮೃತ ಪೈಲಟ್ ತಂದೆ
ಹೊಸದಿಲ್ಲಿ: ಅಹ್ಮದಾಬಾದ್‌ನಲ್ಲಿ ಪತನಗೊಂಡ ಏರ್ ಇಂಡಿಯಾ ವಿಮಾನದಲ್ಲಿದ್ದ ಮುಖ್ಯ ಪೈಲಟ್ ಕ್ಯಾಪ್ಟನ್ ಸುಮೀತ್ ಸಭರ್ವಾಲ್ ಅವರ ತಂದೆ ಪುಷ್ಕರಾಜ್ ಸಭರ್ವಾಲ್ ದುರಂತದ ಕುರಿತು ನಿವೃತ್ತ ನ್ಯಾಯಾಧೀಶರ ಮೇಲ್ವಿಚಾರಣೆಯ ಸಮಿತಿಯಿಂದ ತನಿಖೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಪುಷ್ಕರಾಜ್ ಸಭರ್ವಾಲ್ ಮತ್ತು ಭಾರತೀಯ ಪೈಲಟ್‌ಗಳ ಒಕ್ಕೂಟ(FIP) ಅಕ್ಟೋಬರ್ 10ರಂದು ಜಂಟಿಯಾಗಿ ಸಲ್ಲಿಸಿದ ರಿಟ್ ಅರ್ಜಿಯಲ್ಲಿ AI 171 ವಿಮಾನ ಪತನದ ಕುರಿತು ತನಿಖೆಗೆ "ಕೋರ್ಟ್ ಮಾನಿಟರ್ಡ್ ಕಮಿಟಿ" (ನ್ಯಾಯಾಲಯದ ಮೇಲ್ವಿಚಾರಣೆ ಸಮಿತಿ) ರಚಿಸುವಂತೆ ಸೂಚಿಸಿದೆ.
ಏರ್ ಇಂಡಿಯಾ ದುರಂತದ ಬಗ್ಗೆ ತನಿಖೆಯು ನ್ಯಾಯಯುತ, ಪಾರದರ್ಶಕ ಮತ್ತು ತಾಂತ್ರಿಕವಾಗಿ ಉತ್ತಮವಾಗಿರಬೇಕೆಂದು ಆಗ್ರಹಿಸಿದೆ.
ಜೂನ್‌ನಲ್ಲಿ ಗುಜರಾತ್‌ನ ಅಹ್ಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ AI171, ಅಹ್ಮದಾಬಾದ್ ವಿಮಾನ ನಿಲ್ದಾಣದಿಂದ ಹೊರಟ ಕೆಲವೇ ನಿಮಿಷಗಳಲ್ಲಿ ಪತನವಾಗಿತ್ತು. ದುರಂತದಲ್ಲಿ 260 ಜನರು ಮೃತಪಟ್ಟಿದ್ದರು.