×
Ad

ಅಪಘಾತದ ನಂತರ ಉರಿಯುತ್ತಿರುವ ಏರ್ ಇಂಡಿಯಾ ವಿಮಾನದಿಂದ ತಪ್ಪಿಸಿಕೊಳ್ಳಲು ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು!

Update: 2025-06-17 18:23 IST

PC : X \ @dave_janak

ಅಹಮದಾಬಾದ್: ಕಳೆದ ವಾರ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾದ ವೈದ್ಯಕೀಯ ಕಾಲೇಜಿನ ಕಟ್ಟಡದಿಂದ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಜಿಗಿಯುತ್ತಿರುವ ಹೊಸ ವೀಡಿಯೊವೊಂದು ವೈರಲ್ ಆಗಿದೆ.

ಲಂಡನ್‌ಗೆ ತೆರಳುತ್ತಿದ್ದ ಬೋಯಿಂಗ್ 787-8 ಡ್ರೀಮ್‌ಲೈನರ್, ಅಹಮದಾಬಾದ್ ವಿಮಾನ ನಿಲ್ದಾಣದಿಂದ ಎರಡು ಕಿಲೋಮೀಟರ್ ದೂರದಲ್ಲಿ ಟೇಕ್ ಆಫ್ ಆದ ಕೆಲವೇ ಸೆಕೆಂಡುಗಳಲ್ಲಿ ಪತನಗೊಂಡಿತ್ತು. ವಿಮಾನದಲ್ಲಿ 242 ಮಂದಿ ಪ್ರಯಾಣಿಕರಿದ್ದರು.

ಅಪಘಾತದ ಬಳಿಕ ಸ್ಥಳದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿತ್ತು. ವಿಮಾನದಲ್ಲಿದ್ದ ಒಬ್ಬ ವ್ಯಕ್ತಿಯನ್ನು ಹೊರತುಪಡಿಸಿ ಎಲ್ಲರೂ ಸುಟ್ಟು ಕರಕಲಾಗಿದ್ದರು. ವೈದ್ಯಕೀಯ ಕಾಲೇಜಿನ ವೈದ್ಯರು ಮತ್ತು ವಿದ್ಯಾರ್ಥಿಗಳು ಸೇರಿದಂತೆ ಡಜನ್ಗಟ್ಟಲೆ ಸಂತ್ರಸ್ತರು ವಿಮಾನ ಅಪಘಾತದ ಸ್ಥಳದಲ್ಲಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News