×
Ad

ಏರ್ ಇಂಡಿಯಾ ವಿಮಾನ ದುರಂತ ; ವರದಿ ಶೀಘ್ರದಲ್ಲೇ ಸಲ್ಲಿಕೆಯಾಗುವ ನಿರೀಕ್ಷೆ: ನಾಗರಿಕ ವಿಮಾನ ಯಾನ ಸಚಿವ

Update: 2025-07-11 22:53 IST

PC : PTI 

ಮುಂಬೈ: ಜೂನ್ 12ರಂದು ಅಹಮದಾಬಾದ್ ನಲ್ಲಿ ಸಂಭವಿಸಿದ ಏರ್ ಇಂಡಿಯಾ ಡ್ರೀಮ್ ಲೈನರ್ ವಿಮಾನ ಅಪಘಾತದ ಕುರಿತು ವಿಮಾನ ಅಪಘಾತ ತನಿಖಾ ದಳದ ವರದಿ ಅತಿ ಶೀಘ್ರದಲ್ಲೇ ಸಲ್ಲಿಕೆಯಾಗುವ ನಿರೀಕ್ಷೆ ಇದೆ ಎಂದು ನಾಗರಿಕ ವಿಮಾನ ಸಚಿವ ಕೆ.ರಾಮ್ ಮೋಹನ್ ನಾಯ್ಡು ತಿಳಿಸಿದ್ದು ಈ ಸಂಬಂಧ ಪಾರದರ್ಶನ ನಡೆಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಈ ಕುರಿತು ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ರಾಮ್ ಮೋಹನ್ ನಾಯ್ಡು, “ಅತಿ ಶೀಘ್ರದಲ್ಲೇ ನಾವು ಈ ಕುರಿತು ಕೆಲಸ ಮಾಡುತ್ತಿದ್ದೇವೆ. ಇದು ವಿಮಾನ ಅಪಘಾತ ತನಿಖಾ ದಳದ ಜವಾಬ್ದಾರಿಯಾಗಿದ್ದು, ಅವರು ತಮ್ಮ ಕೆಲಸ ಮಾಡಲಿ” ಎಂದು ಹೇಳಿದ್ದಾರೆ.

ನಾವು ತನಿಖೆಯ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹಾಗೂ ಉತ್ತರದಾಯಿತ್ವವನ್ನು ಖಾತರಿಪಡಿಸಲಿದ್ದೇವೆ ಎಂದೂ ಅವರು ಆಶ್ವಾಸನೆ ನೀಡಿದ್ದಾರೆ.

ಜೂನ್ 12ರಂದು ಅಹಮದಾಬಾದ್ ನಿಂದ ಲಂಡನ್ ಗಾಟ್ವಿಕ್ ಗೆ ಟೇಕಾಫ್ ಮಾಡಿದ್ದ ಏರ್ ಇಂಡಿಯಾ ಬೋಯಿಂಗ್ 787-8 ವಿಮಾನವು ಕೆಲವೇ ಕ್ಷಣಗಳಲ್ಲಿ ಅಹಮದಾಬಾದ್ ಹೊರವಲಯದಲ್ಲಿನ ವೈದ್ಯಕೀಯ ಕಾಲೇಜಿನ ವಸತಿ ನಿಲಯವೊಂದರ ಮೇಲೆ ಪತನಗೊಂಡಿತ್ತು. ಈ ದುರ್ಘಟನೆಯಲ್ಲಿ ವಿಮಾನದಲ್ಲಿದ್ದ 242 ಮಂದಿ ಪ್ರಯಾಣಿಕರ ಪೈಕಿ ಓರ್ವ ಪ್ರಯಾಣಿಕ ಮಾತ್ರ ಬದುಕುಳಿದಿದ್ದರು. ಅಲ್ಲದೆ, ಆ ಪ್ರದೇಶದಲ್ಲಿದ್ದ ಜನರೂ ಸೇರಿದಂತೆ ಸುಮಾರು 260 ಮಂದಿ ಮೃತಪಟ್ಟಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News