×
Ad

ಏರ್‌ ಇಂಡಿಯಾ ವಿಮಾನ ದುರಂತದ ಬೆನ್ನಲ್ಲೇ ವೈದ್ಯಕೀಯ ರಜೆ ಮೇಲೆ ತೆರಳಿದ್ದ 112 ಪೈಲಟ್‌ಗಳು!

Update: 2025-07-24 18:26 IST
PC : PTI 

ಹೊಸದಿಲ್ಲಿ: ಅಹ್ಮದಾಬಾದ್‌ನಲ್ಲಿ ಬೋಯಿಂಗ್ 787-ಡ್ರೀಮ್‌ಲೈನರ್‌ ವಿಮಾನ ದುರಂತ ಘಟನೆ ನಡೆದ ಬಳಿಕ 100ಕ್ಕೂ ಅಧಿಕ ಏರ್ ಇಂಡಿಯಾ ಪೈಲಟ್‌ಗಳು ವೈದ್ಯಕೀಯ ರಜೆ ಪಡೆದುಕೊಂಡಿದ್ದಾರೆ ಎಂದು ವಿಮಾನಯಾನ ಸಚಿವ ಮುರಳೀಧರ್ ಮೊಹಲ್ ತಿಳಿಸಿದ್ದಾರೆ.

ವಿಮಾನ ದುರಂತದ ಬಳಿಕ ಏರ್‌ ಇಂಡಿಯಾ ವಿಮಾನ ಯಾನ ಸಂಸ್ಥೆಯ 51 ಹಿರಿಯ ಪೈಲಟ್‌ಗಳು, 61 ಸಹಾಯಕ ಪೈಲಟ್‌ಗಳು ಸೇರಿದಂತೆ ಒಟ್ಟು 112 ಪೈಲಟ್‌ಗಳು ರಜೆ ಕೋರಿ ಮನವಿಯನ್ನು ಸಲ್ಲಿಸಿದ್ದಾರೆ ಎಂದು ಸಚಿವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ವಿಶೇಷವಾಗಿ ಅಪಘಾತದ ನಂತರ ಪೈಲಟ್‌ಗಳ ಮಾನಸಿಕ ಆರೋಗ್ಯದ ಬಗ್ಗೆ ಗಮನ ಹರಿಸುವ ಅಗತ್ಯವಿದೆ ಎಂದು ಹೇಳಿದರು.

ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ವಿಮಾನಯಾನ ಸಚಿವ ಮುರಳೀಧರ್ ಮೊಹಲ್, 2023ರ ಫೆಬ್ರವರಿಯಲ್ಲಿ ಏರ್‌ಲೈನ್ಸ್‌ಗಳಿಗೆ ನೋಟಿಸ್ ನೀಡಲಾಗಿದ್ದು, ವೈದ್ಯಕೀಯ ತಪಾಸಣೆಯ ಸಮಯದಲ್ಲಿ ಸಿಬ್ಬಂದಿಯ ಮಾನಸಿಕ ಆರೋಗ್ಯ ಪರಿಶೀಲಿಸಲು ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸೂಚಿಸಲಾಗಿತ್ತು. ವಿಮಾನ ಸಿಬ್ಬಂದಿ ಮಾನಸಿಕ ಆರೋಗ್ಯವನ್ನು ಕಾಪಾಡುವ ದೃಷ್ಟಿಯಿಂದ ವಿಶೇಷ ತರಬೇತಿ ನೀಡುವಂತೆ ವಿಮಾನಯಾನ ಸಂಸ್ಥೆಗಳಿಗೆ ಮತ್ತು ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News