×
Ad

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಮೃತ್ಯು: ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ

ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆಗೆ ಪಶ್ಚಿಮ ಬಂಗಾಳ ಸಿಎಂ ಆಗ್ರಹ

Update: 2026-01-28 13:47 IST

ಮಮತಾ ಬ್ಯಾನರ್ಜಿ (File Photo: PTI)

ಹೊಸದಿಲ್ಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಅಪಘಾತದ ಬಗ್ಗೆ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಒತ್ತಾಯಿಸಿದ್ದಾರೆ. ಪಿತೂರಿ ಸಾಧ್ಯತೆ ಇದೆ ಎಂದ ಅವರು ದೇಶದ ರಾಜಕೀಯ ನಾಯಕರ ಸುರಕ್ಷತೆ ಬಗ್ಗೆ ಪ್ರಶ್ನೆಯನ್ನು ಎತ್ತಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ, ಪವಾರ್ ಅವರ ನಿಧನದ ಸುದ್ದಿ ಕೇಳಿ ತಾವು ಆಘಾತಕ್ಕೊಳಗಾಗಿದ್ದೇನೆ. ಈ ಘಟನೆ ರಾಷ್ಟ್ರಕ್ಕೆ ಗಂಭೀರ ನಷ್ಟವೆಂದು ಹೇಳಿದ್ದಾರೆ.

ದೇಶದಲ್ಲಿ ರಾಜಕೀಯ ನಾಯಕರಿಗೂ ಸಹ ಯಾವುದೇ ಸುರಕ್ಷತೆ ಮತ್ತು ಭದ್ರತೆ ಇಲ್ಲ ಎಂದು ಅವರು ಆರೋಪಿಸಿದರು. ಪವಾರ್ ಅವರು ಬಿಜೆಪಿಯನ್ನು ತೊರೆಯುವ ಬಗ್ಗೆ ಯೋಚಿಸುತ್ತಿದ್ದರು ಎಂಬುದಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಇತ್ತೀಚಿನ ಹೇಳಿಕೆಗಳನ್ನು ಅವರು ಉಲ್ಲೇಖಿಸಿದರು.

"ಇಂದು ನಡೆದ ಘಟನೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ಈ ಬಗ್ಗೆ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ಮಾತ್ರ ವಿಶ್ವಾಸಾರ್ಹವಾಗಿರುತ್ತದೆ. ನಮಗೆ ಸುಪ್ರೀಂ ಕೋರ್ಟ್ ನಲ್ಲಿ ಮಾತ್ರ ನಂಬಿಕೆ ಇದೆ, ಬೇರೆ ಯಾವುದೇ ಸಂಸ್ಥೆಯ ಮೇಲೆ ಇಲ್ಲ, ತನಿಖಾ ಸಂಸ್ಥೆಗಳು ತಮ್ಮ ಸ್ವಾತಂತ್ರ್ಯವನ್ನು ಕಳೆದುಕೊಂಡಿವೆ" ಎಂದು ಮಮತಾ ಬ್ಯಾನರ್ಜಿ ಆರೋಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News