ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ
Update: 2026-01-31 17:25 IST
ಸುನೇತ್ರಾ ಪವಾರ್ (Photo credit: indiatoday.in)
ಮುಂಬೈ : ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು.
ರಾಜ್ಯಪಾಲ ಆಚಾರ್ಯ ದೇವವ್ರತ್ ಅವರು ಸುನೇತ್ರಾ ಪವಾರ್ ಅವರಿಗೆ ಪ್ರಮಾಣವಚನ ಬೋಧಿಸಿದರು. ಈ ಮೂಲಕ ಅವರು ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಉಪಮುಖ್ಯಮಂತ್ರಿ ಏಕನಾಥ ಶಿಂದೆ ಹಾಗೂ ಎನ್‌ಸಿಪಿ ಮುಖಂಡರಾದ ಪ್ರಫುಲ್ ಪಟೇಲ್ ಸಹಿತ ಹಲವರು ಉಪಸ್ಥಿತರಿದ್ದರು.