×
Ad

ಸೀಟು ಹಂಚಿಕೆ ಅಂತಿಮಗೊಂಡ ಬೆನ್ನಲ್ಲೇ ರಾಹುಲ್ ಗಾಂಧಿ ನೇತೃತ್ವದ ʼಭಾರತ್ ಜೋಡೊ ನ್ಯಾಯ ಯಾತ್ರೆʼಯಲ್ಲಿ ಭಾಗಿಯಾದ ಅಖಿಲೇಶ್

Update: 2024-02-25 20:27 IST

Photo: twitter.com/yadavakhilesh

ಹೊಸದಿಲ್ಲಿ: ಉತ್ತರ ಪ್ರದೇಶದ ಆಗ್ರಾ ಮೂಲಕ ಹಾದು ಹೋಗುತ್ತಿರುವ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ನ್ಯಾಯ ಯಾತ್ರೆಯಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಭಾಗಿಯಾಗಿದ್ದಾರೆ. ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದೊಂದಿಗಿನ ಸೀಟು ಹಂಚಿಕೆಯು ಪೂರ್ಣಗೊಂಡ ಮರು ದಿನ ಈ ಬೆಳವಣಿಗೆ ನಡೆದಿದೆ. ಹಲವಾರು ತಿಂಗಳಿನಿಂದ ನೆನೆಗುದಿಗೆ ಬಿದ್ದಿದ್ದ ಮಾತುಕತೆಯು ಫಲಪ್ರದವಾಗುವಲ್ಲಿ ಮಹತ್ವದ ಪಾತ್ರ ನಿರ್ವಹಿಸಿದ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡಾ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

ಈ ಬದಲಾವಣೆಯು ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟದಲ್ಲಿ ಕೊಂಚ ಮಟ್ಟಿನ ನಿರಾಳತೆಯನ್ನುಂಟು ಮಾಡಿದೆ.

ಸೀಟು ಹಂಚಿಕೆ ವಿಚಾರದಲ್ಲಿ ಹೊಸದಾಗಿ ಬಿಕ್ಕಟ್ಟು ಸೃಷ್ಟಿಯಾಗಿದ್ದರಿಂದ ಭಾರತ್ ಜೋಡೊ ಯಾತ್ರೆಯು ತಮ್ಮ ರಾಜ್ಯದಲ್ಲಿ ಹಾದು ಹೋದಾಗ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅದರಲ್ಲಿ ಪಾಲ್ಗೊಳ್ಳದೆ ದೂರ ಉಳಿದಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News