×
Ad

ಟಿವಿಕೆ ಜೊತೆ ಸಂಭಾವ್ಯ ಮೈತ್ರಿ ಕುರಿತು ತಮಿಳುನಾಡು ಬಿಜೆಪಿ ಅಧ್ಯಕ್ಷ ನೈನಾರ್ ನಾಗೇಂದ್ರನ್ ಹೇಳಿದ್ದೇನು?

"ರಾಜ್ಯದಲ್ಲಿ ಎನ್‌ಡಿಎ 200ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ"

Update: 2026-03-10 22:40 IST

Photo-ANI

ತಿರುಚಿರಾಪಳ್ಳಿ: ತಮಿಳಗ ವೆಟ್ರಿ ಕಳಗಂ (ಟಿವಿಕೆ) ಜೊತೆಗಿನ ಸಂಭಾವ್ಯ ಮೈತ್ರಿ ಕುರಿತು ಬಿಜೆಪಿಯ ಕೇಂದ್ರ ನಾಯಕತ್ವ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ನೈನಾರ್ ನಾಗೇಂದ್ರನ್ ಹೇಳಿದ್ದಾರೆ.

ವಿಜಯ್ ನೇತೃತ್ವದ ಟಿವಿಕೆ ಪಕ್ಷವನ್ನು ಮೈತ್ರಿಗೆ ಆಹ್ವಾನಿಸಿದ್ದ ಪಕ್ಷದ ಕಾರ್ಯಕರ್ತರನ್ನು ತೆಗೆದುಹಾಕಿರುವುದು ಪಕ್ಷದ ಆಂತರಿಕ ವಿಷಯ ಎಂದು ಹೇಳಿದರು.

ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ನಾಗೇಂದ್ರನ್, ಪಂಚಪುರದಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಯು ತಮಿಳುನಾಡಿನಲ್ಲಿ ರಾಜಕೀಯ ಬದಲಾವಣೆಯ ಆರಂಭವನ್ನು ಸೂಚಿಸುತ್ತದೆ. ಪ್ರಧಾನಿ ನರೇಂದ್ರ ಮೋದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದಾದ್ಯಂತ ಎನ್‌ಡಿಎ ಕಾರ್ಯಕರ್ತರು ಮತ್ತು ಅವರ ಕುಟುಂಬದ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಅವರು ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿ ಹುದ್ದೆಯ ಕುರಿತು ಮಾತನಾಡಿದ ಅವರು, ಯಾರು ಮುಖ್ಯಮಂತ್ರಿಯಾಗಬೇಕೆಂದು ಜನರು ನಿರ್ಧರಿಸುತ್ತಾರೆಯೇ ಹೊರತು ಎಂ. ಕೆ. ಸ್ಟಾಲಿನ್ ಅಲ್ಲ. ರಾಜ್ಯದಲ್ಲಿ ಎನ್‌ಡಿಎ 200ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News