×
Ad

ಗಡುವು ಮೀರಿ ಭಾರತದಲ್ಲಿರುವ ಪಾಕ್ ಪ್ರಜೆಗಳ ಬಗ್ಗೆ ಮಾಹಿತಿ ನೀಡಿ : ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಅಮಿತ್ ಶಾ ದೂರವಾಣಿ ಕರೆ

Update: 2025-04-25 15:33 IST

ಅಮಿತ್ ಶಾ (PTI)

ಹೊಸದಿಲ್ಲಿ : ದೇಶ ತೊರೆಯಲು ನಿಗದಿಪಡಿಸಿದ ಗಡುವನ್ನು ಮೀರಿ ಯಾವುದೇ ಪಾಕಿಸ್ತಾನಿ ಪ್ರಜೆ ಭಾರತದಲ್ಲಿ ಉಳಿಯದಂತೆ ನೋಡಿಕೊಳ್ಳಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಕೇಳಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ದೂರವಾಣಿ ಮೂಲಕ ಸಂಪರ್ಕಿಸಿದ ಗೃಹ ಸಚಿವ ಅಮಿತ್ ಶಾ, ಪಾಕಿಸ್ತಾನಿ ಪ್ರಜೆಗಳನ್ನು ಪತ್ತೆಹಚ್ಚಿ ಅವರ ವೀಸಾಗಳನ್ನು ರದ್ದುಪಡಿಸಲು ಕೇಂದ್ರ ಸರಕಾರಕ್ಕೆ ಮಾಹಿತಿ ತಿಳಿಸುವಂತೆ ಆಗ್ರಹಿಸಿದ್ದಾರೆ.

ಪಾಕಿಸ್ತಾನಿ ಪ್ರಜೆಗಳಿಗೆ ನೀಡಲಾದ ಎಲ್ಲಾ ವೀಸಾಗಳನ್ನು ಹಿಂತೆಗೆದುಕೊಳ್ಳುವುದಾಗಿ ಭಾರತ ಈಗಾಗಲೇ ಘೋಷಿಸಿದೆ. ಭಾರತ ಪಾಕಿಸ್ತಾನಿ ಪ್ರಜೆಗಳಿಗೆ ನೀಡಿರುವ ವೀಸಾಗಳ ಅವಧಿಯು ಎಪ್ರಿಲ್ 27ರಿಂದ ಜಾರಿಗೆ ಬರುವಂತೆ ಮುಕ್ತಾಯವಾಗಲಿದೆ.

ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಭಾರತ-ಪಾಕ್‌ ನಡುವಿನ ಉದ್ವಿಗ್ನತೆ ಹೆಚ್ಚಾಗಿದೆ. ಪಾಕಿಸ್ತಾನದಲ್ಲಿ ನೆಲೆಸಿರುವ ಭಾರತೀಯ ಪ್ರಜೆಗಳಿಗೆ ಶೀಘ್ರವಾಗಿ ತಾಯ್ನಾಡಿಗೆ ಮರಳಲು ಭಾರತ ಸಲಹೆ ನೀಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News