×
Ad

ಆಂಧ್ರ ಪ್ರದೇಶ | ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ; 18 ಕಾರ್ಮಿಕರಿಗೆ ಗಾಯ

Update: 2024-08-21 18:31 IST

ಸಾಂದರ್ಭಿಕ ಚಿತ್ರ 

ಅಮರಾವತಿ: ರಾಸಾಯನಿಕ ಕಾರ್ಖಾನೆಯೊಂದರಲ್ಲಿ ರಿಯಾಕ್ಟರ್‌ ಸ್ಫೋಟ ಸಂಭವಿಸಿ 18 ಕಾರ್ಮಿಕರು ಗಾಯಗೊಂಡ ಘಟನೆ ಆಂಧ್ರಪ್ರದೇಶದ ಅನಕಪಲ್ಲಿ ಎಂಬಲ್ಲಿ ಬುಧವಾರ ನಡೆದಿದೆ.

ಅಚ್ಯುತಪುರಂನ ವಿಶೇಷ ಆರ್ಥಿಕ ವಲಯದಲ್ಲಿರುವ ಎಸ್ಸೆಂಟಿಯಾ ಫಾರ್ಮಾ ಕಂಪನಿಯಲ್ಲಿ ಮಧ್ಯಾಹ್ನ ಕಾರ್ಮಿಕರು ಊಟ ಮಾಡುತ್ತಿದ್ದ ವೇಳೆ ರಿಯಾಕ್ಟರ್‌ ಸ್ಫೋಟಗೊಂಡಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

ಕಾರ್ಖಾನೆಯಲ್ಲಿ ನಡೆದ ಸ್ಫೋಟದಿಂದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ದಟ್ಟ ಹೊಗೆ ಆವರಿಸಿರುದೆ. ಸಾಮಾಜಿಕ ಜಾಲತಾಣಗಲ್ಲಿ ಇದರ ವಿಡಿಯೋ ವೈರಲ್‌ ಆಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News