ಆಂಧ್ರ ಪ್ರದೇಶ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಗನ್ ಮೋಹನ್ ರೆಡ್ಡಿ
Update: 2024-06-04 21:18 IST
ಜಗನ್ ಮೋಹನ್ ರೆಡ್ಡಿ | PTI
ಆಂಧ್ರಪ್ರದೇಶ: ವಿಧಾನಸಭಾ ಚುನಾವಣೆಯಲ್ಲಿ ವೈಎಸ್ಆರ್ಪಿ ಪಕ್ಷವು ಹೀನಾಯವಾಗಿ ಸೋತಿರುವ ಹಿನ್ನೆಲೆಯಲ್ಲಿ ಜಗನ್ ಮೋಹನ್ ರೆಡ್ಡಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ರಾಜ್ಯಪಾಲ ಅಬ್ದುಲ್ ನಝೀರ್ ಅವರಿಗೆ ಜಗನ್ ರೆಡ್ಡಿ ರಾಜೀನಾಮೆ ಪತ್ರ ರವಾನಿಸಿದ್ದಾರೆ.
ಆಂಧ್ರ ಪ್ರದೇಶದ ಒಟ್ಟು 175 ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ವೈಎಸ್ಆರ್ಪಿ ಕೇವಲ 10 ಸ್ಥಾನಗಳಲ್ಲಿ ಜಯಗಳಿಸಿದೆ. ಚಂದ್ರಬಾಬು ನಾಯ್ಡು ನೇತೃತ್ಫ್ವದ ಟಿಡಿಪಿ ಮೈತ್ರಿಕೂಟ 164 ಸ್ಥಾನಗಳಲ್ಲಿ ಜಯಗಳಿಸಿದೆ.