×
Ad

ಆಂಧ್ರದಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆ: ಆರು ಮಾವೋವಾದಿಗಳ ಹತ್ಯೆ

Update: 2025-11-18 12:05 IST

ಸಾಂದರ್ಭಿಕ ಚಿತ್ರ (PTI)

ಮರೇಡುಮಿಲ್ಲಿ (ಆಂಧ್ರಪ್ರದೇಶ): ಆಂಧ್ರ ಪ್ರದೇಶದ ಅಲ್ಲೂರಿ ಸೀತಾರಾಮರಾಜು ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಬೆಳಿಗ್ಗೆ ಭದ್ರತಾ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆಯ ವೇಳೆ ಎನ್ ಕೌಂಟರ್ ನಲ್ಲಿ ಆರು ಮಾವೋವಾದಿಗಳು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಮರೇಡುಮಿಲ್ಲಿ ಮಂಡಲದ ಅರಣ್ಯ ವ್ಯಾಪ್ತಿಯಲ್ಲಿ ಬೆಳಿಗ್ಗೆ 6.30 ರಿಂದ 7 ಗಂಟೆಯ ಅವಧಿಯಲ್ಲಿ ಈ ಎನ್‌ಕೌಂಟರ್ ನಡೆದಿದೆ ಎಂದು ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಬರ್ದಾರ್ ತಿಳಿಸಿದ್ದಾರೆ.

“ಮಂಗಳವಾರ ಬೆಳಿಗ್ಗೆ ನಡೆದ ಕಾರ್ಯಾಚರಣೆಯಲ್ಲಿ ಆರು ಮಾವೋವಾದಿಗಳು ಸಾವನ್ನಪ್ಪಿದ್ದಾರೆ,” ಎಂದು ಅವರು ಪಿಟಿಐಗೆ ಹೇಳಿದ್ದಾರೆ.

ಪೊಲೀಸ್ ಇಲಾಖೆಯ ಹಲವು ವಿಶೇಷ ಘಟಕಗಳು ಜಂಟಿಯಾಗಿ ನಡೆಸಿದ ಈ ಆಪರೇಷನ್‌ ನಂತರ ಪ್ರದೇಶದಲ್ಲಿ ಶೋಧ ಕಾರ್ಯ ವಿಸ್ತರಿಸಲಾಗಿದೆ. ಮೃತಪಟ್ಟವರ ಗುರುತು ಮತ್ತು ಸಂಘಟನೆಯ ಸಂಪರ್ಕ ಕುರಿತು ತನಿಖೆ ಮುಂದುವರಿದಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News