×
Ad

ಅಮೆರಿಕದಲ್ಲಿ ಅನ್ಮೋಲ್ ಬಿಷ್ಣೋಯಿ ಬಂಧನ ?

Update: 2024-11-18 22:10 IST

ಅನ್ಮೋಲ್ ಬಿಷ್ಣೋಯಿ | PC : X 

ಹೊಸದಿಲ್ಲಿ : ಭೂಗತ ಪಾತಕಿ ಲಾರೆನ್ಸ್ ಬಿಷ್ಣೋಯಿಯ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯಿಯನ್ನು ಅಮೆರಿಕಾದ ಕ್ಯಾಲಿಫೋರ್ನಿಯಾದಲ್ಲಿ ಬಂಧಿಸಲಾಗಿದೆ ಹೇಳಲಾಗಿದೆ.

ಅನ್ಮೋಲ್ ಬಿಷ್ಣೋಯಿ ಅಮೆರಿಕದಲ್ಲಿ ಇರುವ ಬಗ್ಗೆ ದೃಢಪಟ್ಟ ಬಳಿಕ ಆತನನ್ನು ಗಡಿಪಾರು ಮಾಡುವಂತೆ ಮುಂಬೈ ಪೊಲೀಸರು ಅಮೆರಿಕದ ಸಂಬಂಧಿಸಿದ ಪ್ರಾಧಿಕಾರಕ್ಕೆ ಪ್ರಸ್ತಾವ ಕಳುಹಿಸಿದ ಹಿನ್ನೆಲೆಯಲ್ಲಿ ಈ ಬಂಧನ ನಡೆದಿದೆ ಎಂದು ಹೇಳಲಾಗುತ್ತಿದೆ.

2022ರಲ್ಲಿ ನಡೆದ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ಹತ್ಯೆ ಹಾಗೂ ಈ ವರ್ಷದ ಆರಂಭದಲ್ಲಿ ನಟ ಸಲ್ಮಾನ್ ಖಾನ್ ಅವರ ಮುಂಬೈ ನಿವಾಸದ ಮೇಲೆ ಗುಂಡು ಹಾರಿಸಿರುವುದು ಸೇರಿದಂತೆ ಹಲವು ಉನ್ನತ ಮಟ್ಟದ ಅಪರಾಧಗಳೊಂದಿಗೆ ಅನ್ಮೋಲ್ ಬಿಷ್ಣೋಯಿ ಸಂಬಂಧ ಹೊಂದಿದ್ದಾನೆ.

ಕಳೆದ ತಿಂಗಳು ಮಹಾರಾಷ್ಟ್ರದ ಮಾಜಿ ಸಚಿವ ಹಾಗೂ ಎನ್‌ಸಿಪಿ ನಾಯಕ ಬಾಬಾ ಸಿದ್ದೀಕ್ ಅವರ ಹತ್ಯೆಯಲ್ಲಿ ಕೂಡ ಅನ್ಮೋಲ್ ಬಿಷ್ಣೋಯಿಯ ಕೈವಾಡ ಇದೆ ಎಂದು ಶಂಕಿಸಲಾಗಿದೆ. ಅನ್ಮೋಲ್ ಬಿಷ್ಣೋಯಿಯನ್ನು ಸೋಮವಾರ ಬೆಳಗ್ಗೆ ವಶಕ್ಕೆ ತೆಗೆದುಕೊಳ್ಳಲಾಯಿತು ಎಂದು ಮೂಲಗಳು ತಿಳಿಸಿವೆ.

ಅನ್ಮೋಲ್ ಬಿಷ್ಣೋಯಿಯನ್ನು ಬಂಧಿಸಲು ಮಾಹಿತಿ ನೀಡುವವರಿಗೆ 10 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಇತ್ತೀಚೆಗೆ ಘೋಷಿಸಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News