×
Ad

ಹರಿಯಾಣದಲ್ಲಿ ಬಿಜೆಪಿ ಅಭ್ಯರ್ಥಿಗಳು ಫೋಗಟ್, ಪುನಿಯಾ ಅವರನ್ನು ಸೋಲಿಸುತ್ತಾರೆ: ಬ್ರಿಜ್ ಭೂಷಣ್ ಸಿಂಗ್

Update: 2024-09-07 11:05 IST

ಬ್ರಿಜ್ ಭೂಷಣ್ ಸಿಂಗ್ (Photo: PTI)

ಗೊಂಡಾ (ಉತ್ತರ ಪ್ರದೇಶ): ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪೂನಿಯಾ ಅವರನ್ನು ಬಿಜೆಪಿ ಅಭ್ಯರ್ಥಿಗಳು ಹರಿಯಾಣದಲ್ಲಿ ಸೋಲಿಸುತ್ತಾರೆ ಎಂದು ಬಿಜೆಪಿಯ ಮಾಜಿ ಸಂಸದ ಮತ್ತು ಡಬ್ಲ್ಯುಎಫ್‌ಐ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಹೇಳಿದ್ದಾರೆ. ಪಕ್ಷ ಬಯಸಿದರೆ ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರ ಮಾಡಲು ತಾನು ಸಿದ್ಧ ಎಂದೂ ಅವರು ಹೇಳಿದ್ದಾರೆ.

ತಮ್ಮ ನಿವಾಸ ವಿಷ್ಣೋಹರಪುರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈ ಕುಸ್ತಿಪಟುಗಳು ಕ್ರೀಡೆಯಲ್ಲಿ ಹೆಸರು ಮಾಡಿ ಕುಸ್ತಿಯ ಬಲದಿಂದ ಜನಪ್ರಿಯತೆ ಗಳಿಸಿದ್ದಾರೆ. ಈಗ ಕಾಂಗ್ರೆಸ್ ಸೇರಿದ ನಂತರ ಅವರ ಹೆಸರು ಅಳಿಸಿ ಹೋಗಲಿದೆ ಎಂದು ಹೇಳಿದ್ದಾರೆ.

ಹರಿಯಾಣದಿಂದ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುತ್ತಾರೆ ಎಂದು ಅವರು ಯೋಚಿಸುತ್ತಿದ್ದಾರೆ. ಅವರು ಹರಿಯಾಣದ ಯಾವುದೇ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸದರೂ ಬಿಜೆಪಿಯ ಒಬ್ಬ ಸಣ್ಣ ಅಭ್ಯರ್ಥಿ ಅವರನ್ನು ಸೋಲಿಸುತ್ತಾರೆ ಎಂದು ಬ್ರಿಜ್ ಭೂಷಣ್ ಹೇಳಿದರು.

ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಹರಿಯಾಣದ ಜನರು ನೀವು ಬಂದು ಇಲ್ಲಿಂದ ಸ್ಪರ್ಧಿಸಿದರೆ ನಿಮ್ಮನ್ನು ಗೆಲ್ಲಿಸುತ್ತೇವೆ ಎಂದು ಹೇಳುತ್ತಿದ್ದರು. ಆದರೆ ಆ ಸಮಯದಲ್ಲಿ ನಾನು ಅವರನ್ನು ನಿರಾಕರಿಸಿದ್ದೆ ಎಂದು ಅವರು ಹೇಳಿದ್ದಾರೆ.

ಇದಕ್ಕೂ ಮೊದಲು, ಆಗಿನ ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳ ಪ್ರತಿಭಟನೆಯಲ್ಲಿ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಮುಚೂಣಿಯಲ್ಲಿದ್ದರು.

ಹರಿಯಾಣದಲ್ಲಿ ಅಕ್ಟೋಬರ್ 5 ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಸೇರಿರುವ ಇಬ್ಬರ ಪೈಕಿ ವಿನೇಶ್ ಫೋಗಟ್ ಗೆ ಈಗಾಗಲೇ ಪಕ್ಷವು ಟಿಕೆಟ್ ನೀಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News