×
Ad

ಭವಿಷ್ಯದಲ್ಲಿ ಭಯೋತ್ಪಾದನಾ ಕೃತ್ಯವನ್ನು ಯುದ್ಧವೆಂದು ಪರಿಗಣಿಸಲಾಗುವುದು : ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ ಭಾರತ

Update: 2025-05-10 18:25 IST

Photo | X

ಹೊಸದಿಲ್ಲಿ : ಭವಿಷ್ಯದಲ್ಲಿ ಪಾಕಿಸ್ತಾನ ನಡೆಸುವ ಯಾವುದೇ ಭಯೋತ್ಪಾದಕ ಕೃತ್ಯವನ್ನು ಯುದ್ಧ ಕೃತ್ಯವೆಂದು ಪರಿಗಣಿಸಲಾಗುತ್ತದೆ ಮತ್ತು ಭಾರತ ಅದಕ್ಕೆ ತಕ್ಕಂತೆ ಪ್ರತಿಕ್ರಿಯಿಸಲಿದೆ ಎಂದು ಭಾರತ ಸರಕಾರದ ಉನ್ನತ ಮೂಲಗಳು ಶನಿವಾರ ತಿಳಿಸಿರುವ ಬಗ್ಗೆ ವರದಿಯಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ದಿಲ್ಲಿಯಲ್ಲಿರುವ ತಮ್ಮ ನಿವಾಸದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಮೂರು ಸಶಸ್ತ್ರ ಪಡೆಗಳ ಮುಖ್ಯಸ್ಥರೊಂದಿಗೆ ಉನ್ನತ ಮಟ್ಟದ ಭದ್ರತಾ ಸಭೆ ನಡೆಸಿದ ಬೆನ್ನಲ್ಲೇ ಈ ಘೋಷಣೆ ಹೊರಬಿದ್ದಿದೆ. ಪಾಕಿಸ್ತಾನ ಉತ್ತರ ಭಾರತದ ಮಿಲಿಟರಿ ನೆಲೆಗಳು ಮತ್ತು ನಾಗರಿಕ ಪ್ರದೇಶಗಳ ಮೇಲೆ ಡ್ರೋನ್ ಮತ್ತು ಕ್ಷಿಪಣಿಗಳ ಮೂಲಕ ದಾಳಿಗೆ ಯತ್ನಿಸುತ್ತಿರುವ ಮಧ್ಯೆ ಈ ಎಚ್ಚರಿಕೆ ಮಹತ್ವದ್ದಾಗಿದೆ.

ಈ ನಿರ್ಧಾರದೊಂದಿಗೆ ಭಯೋತ್ಪಾದನಾ ಕೃತ್ಯಗಳನ್ನು ಸಂಪೂರ್ಣವಾಗಿ ಮಟ್ಟಹಾಕಲು ಕೇಂದ್ರ ಸರಕಾರ ಮುಂದಾಗಿದೆ. ಪಹಲ್ಗಾಮ್‌ನಲ್ಲಿ 26 ಪ್ರವಾಸಿಗರ ಹತ್ಯೆ ನಡೆದು ಎರಡು ವಾರಗಳ ಬಳಿಕ ಈ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಪಹಲ್ಗಾಮ್ ಭಯೋತ್ಪದಕ ದಾಳಿಗೆ ಪ್ರತಿಕಾರವಾಗಿ ಆಪರೇಷನ್ ಸಿಂದೂರ ಮೂಲಕ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಮೇಲೆ ಭಾರತೀಯ ಸೇನೆ ಕ್ಷಿಪಣಿ ದಾಳಿ ನಡೆಸಿ ತಕ್ಕ ಪ್ರತ್ಯುತ್ತರ ನೀಡಿದೆ. ಆ ಬಳಿಕ ಭಾರತ ಮತ್ತು ಪಾಕ್ ನಡುವಿನ ಸ್ಥಿತಿ ಮತ್ತಷ್ಟು ಉದ್ವಿಗ್ನವಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News