×
Ad

ಜಮ್ಮು-ಕಾಶ್ಮೀರದ ದೋಡಾದಲ್ಲಿ ಉಗ್ರರೊಂದಿಗೆ ಗುಂಡಿನ ಕಾಳಗದಲ್ಲಿ ಸೇನೆಯ ಕ್ಯಾಪ್ಟನ್ ಹುತಾತ್ಮ

Update: 2024-08-14 20:29 IST

ದೀಪಕ ಸಿಂಗ್ | PC : indiatoday.in 

ಶ್ರೀನಗರ : ಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಬುಧವಾರ ಶಂಕಿತ ಉಗ್ರರೊಂದಿಗೆ ಗುಂಡಿನ ಕಾಳಗದಲ್ಲಿ ಸೇನೆಯ ಅಧಿಕಾರಿಯೋರ್ವರು ಮೃತಪಟ್ಟಿದ್ದಾರೆ.

ಅಸ್ಸಾರ್ ಪ್ರದೇಶದ ಸಮೀಪ ನಡೆದ ಗುಂಡಿನ ಕಾಳಗಳಲ್ಲಿ 48 ರಾಷ್ಟ್ರೀಯ ರೈಫಲ್ಸ್ನ ಕ್ಯಾಪ್ಟನ್ ದೀಪಕ ಸಿಂಗ್ ಮತ್ತು ಓರ್ವ ನಾಗರಿಕ ಗಾಯಗೊಂಡಿದ್ದು, ಸಿಂಗ್ ಬಳಿಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಗಾಯಾಳು ನಾಗರಿಕ ಹಿರ್ನಿ ಗ್ರಾಮದ ನಿವಾಸಿಯಾಗಿದ್ದಾನೆ.

ಉಗ್ರರು ಅರಣ್ಯ ಪ್ರದೇಶದಲ್ಲಿ ಅಡಗಿದ್ದಾರೆ ಎಂಬ ಮಾಹಿತಿಯ ಮೇರೆಗೆ ಜಂಟಿ ಭದ್ರತಾ ಪಡೆಗಳು ಮಂಗಳವಾರ ಸಂಜೆಯಿಂದಲೇ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದವು. ಘಟನಾ ಸ್ಥಳದಿಂದ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸೇನೆಯ ಮೂಲಗಳು ತಿಳಿಸಿದವು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News