×
Ad

ಆಪರೇಷನ್ ಸಿಂಧೂರ್' ಕಾರ್ಯಾಚರಣೆ ಕುರಿತು ಸೇನಾ ಮುಖ್ಯಸ್ಥರ ಹೇಳಿಕೆ: ವಿಶೇಷ ಸಂಸತ್ ಅಧಿವೇಶನಕ್ಕೆ ಕಾಂಗ್ರೆಸ್ ಆಗ್ರಹ

Update: 2025-06-01 18:01 IST

ಮಲ್ಲಿಕಾರ್ಜುನ ಖರ್ಗೆ | PC : PTI 

ಹೊಸದಿಲ್ಲಿ: ಪಾಕಿಸ್ತಾನದೊಂದಿಗೆ ನಾಲ್ಕು ದಿನಗಳ ಕಾಲ ನಡೆದ ಸೇನಾ ಸಂಘರ್ಷದ ಕುರಿತು ಚರ್ಚಿಸಲು ವಿಶೇಷ ಸಂಸತ್ ಅಧಿವೇಶನವನ್ನು ಕರೆಯಬೇಕು ಎಂದು ಶನಿವಾರ ಆಗ್ರಹಿಸಿರುವ ಕಾಂಗ್ರೆಸ್, ಕೇಂದ್ರ ಸರಕಾರ ದೇಶವನ್ನು ದಾರಿ ತಪ್ಪಿಸುತ್ತಿದೆ ಎಂದೂ ಆರೋಪಿಸಿದೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, "ಚೀಫ್ ಡಿಫೆನ್ಸ್ ಸ್ಟಾಫ್ ಜನರಲ್ ಅನಿಲ್ ಚೌಹಾಣ್ ನೀಡಿರುವ ಹೇಳಿಕೆಯ ಹಿನ್ನೆಲೆಯಲ್ಲಿ, ಕೆಲವು ತುಂಬಾ ಮುಖ್ಯ ಪ್ರಶ್ನೆಗಳನ್ನು ಕೇಳಬೇಕಾದ ಅಗತ್ಯವಿದೆ" ಎಂದು ಅಭಿಪ್ರಾಯ ಪಟ್ಟಿದ್ದಾರೆ.

"ತಕ್ಷಣವೇ ವಿಶೇಷ ಸಂಸತ್ ಅಧಿವೇಶನವನ್ನು ಆಯೋಜಿಸದೆ, ಈ ಪ್ರಶ್ನೆಗಳನ್ನು ಕೇಳಲು ಸಾಧ್ಯವಿಲ್ಲ" ಎಂದೂ ಅವರು ಹೇಳಿದ್ದಾರೆ.

ಇದಕ್ಕೂ ಮುನ್ನ Blomberg TVಗೆ ಸಂದರ್ಶನ ನೀಡಿದ್ದ ಚೀಫ್ ಡಿಫೆನ್ಸ್ ಸ್ಟಾಫ್ ಜನರಲ್ ಅನಿಲ್ ಚೌಹಾಣ್, ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ವೇಳೆ ಭಾರತೀಯ ವಾಯುಪಡೆ ಯುದ್ಧ ವಿಮಾನಗಳ ನಷ್ಟ ಅನುಭವಿಸಿರುವುದು ನಿಜ ಎಂದು ಒಪ್ಪಿಕೊಂಡಿದ್ದರು. ಆದರೆ, ಪಾಕಿಸ್ತಾನ ಪ್ರತಿಪಾದಿಸುತ್ತಿರುವಂತೆ ಭಾರತದ ಆರು ಯುದ್ಧ ವಿಮಾನಗಳನ್ನು ಹೊಡೆದುರುಳಿಸಲಾಗಿರುವುದು ಸಂಪೂರ್ಣ ಸುಳ್ಳು ಎಂದೂ ಅವರು ಅಲ್ಲಗಳೆದಿದ್ದರು.

ಈ ಹಿನ್ನೆಲೆಯಲ್ಲಿ, ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಕುರಿತು ಬಿಜೆಪಿ ನೇತೃತ್ವದ ಕೇಂದ್ರ ಸರಕಾರವು ದೇಶವನ್ನು ದಾರಿ ತಪ್ಪಿಸುತ್ತಿದೆ ಎಂದು ವಿರೋಧ ಪಕ್ಷಗಳು ಕೇಂದ್ರ ಸರಕಾರದ ಮೇಲೆ ಮುಗಿಬಿದ್ದಿವೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News