ಅರುಣಾಚಲಪ್ರದೇಶ | ಭಾರಿ ಮಳೆ, ಪ್ರವಾಹದಿಂದ ಭೂಕುಸಿತ: 10ಕ್ಕೇರಿದ ಮೃತರ ಸಂಖ್ಯೆ
Update: 2025-06-02 18:31 IST
PC : PTI
ಇಟಾನಗರ: ಅರುಣಾಚಲ ಪ್ರದೇಶದಲ್ಲಿ ಭಾರಿ ಮಳೆ, ಪ್ರವಾಹದಿಂದ ಭೂಕುಸಿತ ಉಂಟಾಗಿದ್ದು, ಮೃತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ಪ್ರಕಾರ, 23 ಜಿಲ್ಲೆಗಳ 156 ಗ್ರಾಮಗಳ 938 ಜನರು ಪ್ರವಾಹದಿಂದಾಗಿ ಸಂತ್ರಸ್ತರಾಗಿದ್ದಾರೆ. ಲೋಹಿತ್ ಜಿಲ್ಲೆಯಲ್ಲಿ ಪ್ರವಾಹಕ್ಕೆ ಸಿಲುಕಿ ಮೃತಪಟ್ಟ ಒಬ್ಬರ ಮೃತದೇಹವನ್ನು ಹೊರತೆರೆಯಲಾಗಿದೆ ಎಂದು ತಿಳಿದು ಬಂದಿದೆ.
ಭಾರೀ ಮಳೆ ಸುರಿದ ಪರಿಣಾಮ ಹಲವು ಪ್ರದೇಶಗಳಲ್ಲಿ ಭೂಕುಸಿತ ವರದಿಯಾಗಿದೆ. ಭೂಕುಸಿತ ಸಂಭವಿಸಬಹುದಾದ ಪ್ರದೇಶಗಳಲ್ಲಿ ಜನ ಎಚ್ಚರವಾಗಿರುವಂತೆ ಸೂಚಿಸಲಾಗಿದೆ. ರಾಜ್ಯದಲ್ಲಿ ಬಹುತೇಕ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.