×
Ad

ತಮ್ಮ ಬಂಧನದ ವಿರುದ್ಧ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಅರವಿಂದ್‌ ಕೇಜ್ರಿವಾಲ್‌

Update: 2024-03-22 12:53 IST

ಅರವಿಂದ್ ಕೇಜ್ರಿವಾಲ್ (PTI)

ಹೊಸ ದಿಲ್ಲಿ: ನಾಟಕೀಯ ಬೆಳವಣಿಗೆಯೊಂದರಲ್ಲಿ ತಮ್ಮ ಬಂಧನದ ವಿರುದ್ಧ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯನ್ನು ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಿಂಪಡೆದಿದ್ದಾರೆ. ಕೇಜ್ರಿವಾಲ್ ಅವರು ಕೆಳ ಹಂತದ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಳೆದ ವಾರ ಇದೇ ಪ್ರಕರಣದಲ್ಲಿ ಬಂಧಿತರಾಗಿದ್ದ ಬಿಆರ್‌ ಎಸ್ ನಾಯಕಿ ಕೆ.ಕವಿತಾ ಅವರ ಅರ್ಜಿಯನ್ನು ಸುಪ್ರೀಂ ಕೋರ್ಟ್ ನ ವಿಶೇಷ ಪೀಠವು ತಿರಸ್ಕರಿಸಿರುವ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಲಾಗಿದೆ. ಜಾಮೀನು ಸೇರಿದಂತೆ ಯಾವುದೇ ಪರಿಹಾರಕ್ಕೆ ವಿಚಾರಣಾ ನ್ಯಾಯಾಲಯದ ಮೊರೆ ಹೋಗುವಂತೆ ಕೆ.ಕವಿತಾ ಅವರಿಗೆ ವಿಶೇಷ ಪೀಠವು ಸೂಚಿಸಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News